HomeLatest Newsವೃತ್ತಿಪರ ಕೋರ್ಸ್ ಪ್ರವೇಶ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಸಿಇಟಿ ಫಲಿತಾಂಶ ಘೋಷಣೆಗೆ ಮೊದಲೇ ದಾಖಲೆ ಪರಿಶೀಲನೆ

ವೃತ್ತಿಪರ ಕೋರ್ಸ್ ಪ್ರವೇಶ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಸಿಇಟಿ ಫಲಿತಾಂಶ ಘೋಷಣೆಗೆ ಮೊದಲೇ ದಾಖಲೆ ಪರಿಶೀಲನೆ

ಬೆಂಗಳೂರು: ಸಿಇಟಿ ಫಲಿತಾಂಶ ಘೋಷಣೆಗೆ ಮೊದಲೇ ದಾಖಲೆಗಳ ಪರಿಶೀಲಿಸಿ ಫಲಿತಾಂಶದ ನಂತರ ಆಪ್ಷನ್ ಎಂಟ್ರಿಗೆ ಅವಕಾಶ ಕಲ್ಪಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಯೋಜಿಸಿದೆ.

ಅಭ್ಯರ್ಥಿಗಳು ತಮಗೆ ಅನುಕೂಲವಾಗುವ ದಿನಾಂಕದಂದು ಸಮಯ ನಿಗದಿಪಡಿಸಿಕೊಂಡು ದಾಖಲೆ ಪರಿಶೀಲನೆ ಮಾಡಿಸಿಕೊಳ್ಳಬಹುದು. ಒಂದು ದಿನಕ್ಕೆ ಒಂದು ಸಾವಿರ ಮಂದಿಯ ದಾಖಲೆ ಪರಿಶೀಲನೆಗೆ ಯೋಜನೆ ರೂಪಿಸಲಾಗಿದೆ ಎಂದು ಕರ್ನಾಟಕ ಪರೀಕ್ಷೆ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.

ಅರ್ಜಿಯಲ್ಲಿನ ದೋಷ ಸರಿಪಡಿಸಿಕೊಳ್ಳಲು ಮೇ 2 ರವರೆಗೆ ಕಾಲಾವಕಾಶ ನೀಡಲಾಗಿದೆ. ಇದುವರೆಗೆ 16,000ಕ್ಕೂ ಹೆಚ್ಚು ಮಂದಿ ತಿದ್ದುಪಡಿ ಮಾಡಿಕೊಂಡಿದ್ದು, ಇವೆರೆಲ್ಲರೂ ಮತ್ತೊಮ್ಮೆ ತಮ್ಮ ಸಂಬಂಧಪಟ್ಟ ಪಿಯು ಕಾಲೇಜು ಅಥವಾ ಹತ್ತಿರದ ಸರ್ಕಾರಿ ಪಿಯು ಕಾಲೇಜುಗಳಿಗೆ ತೆರಳಿ ಪರಿಶೀಲನೆ ಮಾಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular