ವರ್ಗಾವಣೆಯ ನಿರೀಕ್ಷೆಯಲ್ಲಿರುವ `ಪಿಯು’ ಕಾಲೇಜು ಪ್ರಾಂಶುಪಾಲರು, ಉಪನ್ಯಾಸಕರಿಗೆ ಮಹತ್ವದ ಮಾಹಿತಿ

ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು ಹಾಗೂ ಉಪನ್ಯಾಸಕರಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಮಹತ್ವದ ಮಾಹಿತಿ ನೀಡಿದ್ದು, ಪಿಯು ಕಾಲೇಜುಗಳ ಪ್ರಾಂಶುಪಾಲರ/ಉಪನ್ಯಾಸಕರ ವೃಂದದ ವರ್ಗಾವಣೆಗಳನ್ನು ಗಣಕೀಕೃತ ಕೌನ್ಸೆಲಿಂಗ್ ಮೂಲಕ ನಿರ್ವಹಿಸುವಂತೆ ಸೂಚನೆ ನೀಡಿದೆ.

ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ಶಿಕ್ಷಕರ ವರ್ಗಾವಣೆ ನಿಯಂತ್ರಣ) ಅಧಿನಿಯಮಗಳು – 2020″ ಮತ್ತು ಉಲ್ಲೇಖ-3ರ ನಿಯಮಗಳನ್ವಯ ಪ್ರಾಂಶುಪಾಲರ / ಉಪನ್ಯಾಸಕರ ವರ್ಗಾವಣೆಗಳನ್ನು ಗಣಕೀಕೃತ ಕೌನ್ಸೆಲಿಂಗ್ ಮೂಲಕ ನಡೆಸಲು ಅವಕಾಶ ಕಲ್ಪಿಸಲಾಗಿದೆ.

 ಅದರಂತೆ, 2023-24ನೇ ಸಾಲಿಗೆ ಪ್ರಾಂಶುಪಾಲರ / ಉಪನ್ಯಾಸಕರ ವರ್ಗಾವಣೆಗಳನ್ನು ಗಣಕೀಕೃತ ಕೌನ್ಸೆಲಿಂಗ್‌ ಮೂಲಕ ನಡೆಸಲು ಉಲ್ಲೇಖ-4ರಲ್ಲಿ ಸರ್ಕಾರವು ಅನುಮತಿಸಿರುತ್ತದೆ. ಈ ವರ್ಗಾವಣೆಗೆ ಅರ್ಜಿಗಳನ್ನು ಆನ್‌ಲೈನ್‌ (Online) ಮೂಲಕ ಮಾತ್ರ ಸಲ್ಲಿಸತಕ್ಕದ್ದು, ಖುದ್ದಾಗಿ ಅಥವಾ ಪತ್ರ ಮುಖೇನ ಮೂಲಕ ಲಿಖಿತವಾಗಿ ಸಲ್ಲಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ ಮತ್ತು ಪರಿಗಣಿಸಲಾಗುವುದಿಲ್ಲ ಎಂದು ಮಾಹಿತಿ ನೀಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read