ಪಡಿತರ ಚೀಟಿದಾರರಿಗೆ ಬಹುಮುಖ್ಯ ಮಾಹಿತಿ : ಆ.31 ರೊಳಗೆ ತಪ್ಪದೇ ಈ ಕೆಲಸ ಮಾಡಿ!

ಬೆಂಗಳೂರು : ಎಲ್ಲಾ ಪಡಿತರ ಚೀಟಿ ಫಲಾನುಭವಿಗಳ   ಇ-ಕೆವೈಸಿ ಸಂಗ್ರಹಣೆಯನ್ನು ನ್ಯಾಯಬೆಲೆ ಅಂಗಡಿಗಳ ಮಟ್ಟದಲ್ಲಿ ಅಗಸ್ಟ್ 31 ರೊಳಗೆ ಪೂರ್ಣಗೊಳಿಸಲು ತಿಳಿಸಲಾಗಿದೆ.

ಪಡಿತರ ಚೀಟಿ ಫಲಾನುಭವಿಗಳ ಇ-ಕೆವೈಸಿ ಬಾಕಿ ಇದ್ದು, ಅಂತಹ ಫಲಾನುಭವಿಗಳ ಪಟ್ಟಿಯನ್ನು ಪ್ರತಿ ನ್ಯಾಯಬೆಲೆ ಅಂಗಡಿಗಳ ಮುಂದೆ ಪ್ರಕಟಿಸಲಾಗುತ್ತದೆ. ಸಂಬಂಧಿಸಿದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ಫಲಾನುಭವಿಗಳು ಆಗಸ್ಟ್ 31 ರೊಳಗಾಗಿ ಇ-ಕೆವೈಸಿ ಪೂರ್ಣಗೊಳಿಸಿಕೊಳ್ಳಬೇಕು.

ವಿನಾಯಿತಿ ನೀಡಲಾಗಿರುವ ಪಡಿತರ ಚೀಟಿಯಲ್ಲಿ ಬೆರಳಚ್ಚು ಪಡೆಯಲು ಆಗದೆ ಇರುವ ಪಡಿತರ ಫಲಾನುಭವಿಗಳನ್ನು ಅಮಾನತು ಪಡಿಸದೆ, ಪುನಃ ಬೆರಳಚ್ಚು ಪಡೆಯಲು, ಬೆರಳಚ್ಚು ಬಾರದೆ ಇದ್ದಲ್ಲಿ ನ್ಯಾಯಬೆಲೆ ಅಂಗಡಿಗಳಲ್ಲಿ ಐರಿಸ್(IಖIS)  ತಂತ್ರಾಂಶವನ್ನು ಬಳಸಿ ಫಲಾನುಭವಿಗಳ  ಇ-ಕೆವೈಸಿ ಪೂರ್ಣಗೊಳಿಸಲಾಗುವುದು.

ಪಡಿತರ ಚೀಟಿ ಫಲಾನುಭವಿಗಳ ಇ-ಕೆವೈಸಿ ಸಂಗ್ರಹಣೆಯನ್ನು ನಿಗದಿತ ಅವಧಿಯೋಳಗೆ ಪೂರ್ಣಗೊಳಿಸಿಕೊಳ್ಳದೆ ಇರುವಂತಹ ಪಡಿತರ ಚೀಟಿಗಳ ಸದಸ್ಯರುಗಳನ್ನು ಪಡಿತರ ಚೀಟಿಯಿಂದ ಅಮಾನತುಗೊಳಿಸುವ ಮೂಲಕ ಆಹಾರಧಾನ್ಯ ಮತ್ತು ಡಿಬಿಟಿ ನಗದು ಸೌಲಭ್ಯವನ್ನು ಸೆಪ್ಟೆಂಬರ್ ಮಾಹೆಯಿಂದ ಸ್ಥಗಿತಗೊಳಿಸಲಾಗುವುದು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಪಡಿತರ ಚೀಟಿದಾರರು ತಮ್ಮ ಕುಟುಂಬದ ಯಾರಾದರೂ ಒಬ್ಬ ಸದಸ್ಯರ ಜಾತಿ ಪ್ರಮಾಣ ಪತ್ರವನ್ನು ನ್ಯಾಯಬೆಲೆ ಅಂಗಡಿಯಲ್ಲಿ ನೀಡಿ ನಿಖರವಾದ ವಿವರ ದಾಖಲಿಸಿಕೊಳ್ಳಬೇಕು ಎಂದು ಆಹಾರ ಇಲಾಖೆ ತಿಳಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read