HomeKarnatakaS.C ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

S.C ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಒಳಪಡುವ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ/ಬಾಲಕಿಯರ ವಿದಾರ್ಥಿ ನಿಲಯಗಳ ಪ್ರವೇಶಾತಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಫೆ.20ರ ವರೆಗೆ ವಿಸ್ತರಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಬಳ್ಳಾರಿ   ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ಪರಿಶಿಷ್ಠ ಜಾತಿ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ/ಬಾಲಕೀಯರ ವಿದ್ಯಾರ್ಥಿ ನಿಲಯಗಳಿಗೆ ಇಂಜಿನೀಯರಿಂಗ್, ಮೆಡಿಕಲ್, ಬಿ.ಎಡ್, ಪ್ಯಾರಾ ಮೆಡಿಕಲ್, ಸ್ನಾತ್ತಕೋತ್ತರ ಕೋರ್ಸ್ಗಳು ಪ್ರಾರಂಭವಾದ ಹಿನ್ನಲೆಯಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸಲಾಗಿದ್ದು, ಪ್ರವೇಶಾತಿ ಪಡೆಯಲು ಸಮಾಜ ಕಲ್ಯಾಣ ಇಲಾಖೆಯ ವೆಬ್ಸೈಟ್ನಲ್ಲಿ ಅರ್ಜಿ ಸಲ್ಲಿಸಿದ ನಂತರ ಸ್ವೀಕೃತಿಯೊಂದಿಗೆ ಅಗತ್ಯ ದಾಖಲಾತಿಗಳನ್ನು ಕೌಲ್ಬಜಾರ್ ಮೊದನಲೇ ಗೇಟ್ ಹತ್ತಿರದ ಡಾ.ಬಿ.ಆರ್.ಅಂಬೇಡ್ಕರ್ ಭವನದ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಅಥವಾ ನಿಲಯಗಳ ಮೇಲ್ವಿಚಾರಕರಿಗೆ ಸಲ್ಲಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular