HomeLatest Newsನಿವೇಶನ ಮಾಲೀಕರಿಗೆ ಮುಖ್ಯ ಮಾಹಿತಿ: ಖಾಲಿ ಸೈಟ್ ನಲ್ಲಿ ತ್ಯಾಜ್ಯ ಪತ್ತೆಯಾದರೆ ದಂಡ

ನಿವೇಶನ ಮಾಲೀಕರಿಗೆ ಮುಖ್ಯ ಮಾಹಿತಿ: ಖಾಲಿ ಸೈಟ್ ನಲ್ಲಿ ತ್ಯಾಜ್ಯ ಪತ್ತೆಯಾದರೆ ದಂಡ

ಬೆಂಗಳೂರು: ಖಾಲಿ ನಿವೇಶನಗಳಲ್ಲಿ ತ್ಯಾಜ್ಯ ಪತ್ತೆಯಾದರೆ ಮಾಲೀಕರಿಗೆ ದಂಡ ವಿಧಿಸಲಾಗುವುದು. ಬಿಬಿಎಂಪಿಯ ಪೂರ್ವ ವಲಯ ವ್ಯಾಪ್ತಿಯ ಖಾಳಿ ನಿವೇಶನಗಳಲ್ಲಿ ತ್ಯಾಜ್ಯ ಸಂಗ್ರಹವಾಗಿದ್ದಲ್ಲಿ ಕೂಡಲೇ ಸ್ವಚ್ಛತೆಗೆ ಕ್ರಮ ಕೈಗೊಳ್ಳುವಂತೆ ನಿವೇಶನ ಮಾಲೀಕರಿಗೆ ನೋಟಿಸ್ ನೀಡಿ ದಂಡ ವಿಧಿಸುವಂತೆ ಪೂರ್ವ ವಲಯ ಆಯುಕ್ತರಾದ ಸ್ನೇಹಲ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

 ಪೂರ್ವ ವಲಯ ಆಯುಕ್ತರ ಕಚೇರಿಯಲ್ಲಿ ಸಾರ್ವಜನಿಕರ ಕೊಂದು ಕೊರತೆ ಸ್ವೀಕಾರ ಕಾರ್ಯಕ್ರಮದಲ್ಲಿ ಹೆಚ್.ಆರ್.ಬಿ.ಆರ್. ಲೇಔಟ್ ನ ಖಾಲಿ ನಿವೇಶನಗಳಲ್ಲಿ ಘನ ತ್ಯಾಜ್ಯ, ಕಟ್ಟಡ ತ್ಯಾಜ್ಯ ಶೇಖರಣೆಯಾಗಿದ್ದು, ಸ್ಥಳೀಯ ನಿವಾಸಿಗಳಿಗೆ ತೊಂದರೆಯಾಗುತ್ತಿದೆ ಎಂದು ಸಾರ್ವಜನಿಕರೊಬ್ಬರು ದೂರಿದ್ದಾರೆ.

ಇದನ್ನು ಗಂಭೀರವಾಗಿ ಪರಿಗಣಿಸಿದ ಸ್ನೇಹಲ್ ಅವರು, ಪೂರ್ವ ವಲಯ ವ್ಯಾಪ್ತಿಯ ಖಾಲಿ ನಿವೇಶನಗಳಲ್ಲಿ ತ್ಯಾಜ್ಯ ಮತ್ತು ಕಟ್ಟಡ ಅವಶೇಷ ಸಂಗ್ರಹವಾಗಿದ್ದಲ್ಲಿ ಮಾಲೀಕರಿಗೆ ನೋಟಿಸ್ ನೀಡಿ ದಂಡ ವಿಧಿಸುವಂತೆ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular