HomeLatest Newsಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಅಂಕಪಟ್ಟಿ ಮಾಹಿತಿ ತಿದ್ದುಪಡಿಗೆ ಅ. 22 ವರೆಗೆ ಅವಕಾಶ

ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಅಂಕಪಟ್ಟಿ ಮಾಹಿತಿ ತಿದ್ದುಪಡಿಗೆ ಅ. 22 ವರೆಗೆ ಅವಕಾಶ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ 2025 ರಲ್ಲಿ ವಿತರಿಸಲಾದ ಎಸ್ಎಸ್ಎಲ್ಸಿ ಪರೀಕ್ಷೆ 1, 2 ಮತ್ತು 3ರ ಉತ್ತೀರ್ಣ ಅಂಕಪಟ್ಟಿಯಲ್ಲಿ ತಪ್ಪಾಗಿ ನಮೂದಾಗಿರುವ ಮಾಹಿತಿಗಳ ತಿದ್ದುಪಡಿಗೆ ಅಕ್ಟೋಬರ್ 20ರವರೆಗೆ ಅವಕಾಶ ನೀಡಲಾಗಿದೆ.

ಶಾಲಾ ಹಂತದಲ್ಲಿ ವಿದ್ಯಾರ್ಥಿಯ ಹೆಸರು, ತಂದೆ, ತಾಯಿಯ ಹೆಸರು, ಜನ್ಮ ದಿನಾಂಕ, ಲಿಂಗ, ಮಾಧ್ಯಮ ಮಾಹಿತಿಗಳು ತಪ್ಪಾಗಿದ್ದಲ್ಲಿ ನಿಗದಿಪಡಿಸಿದ ಶುಲ್ಕ ಪಾವತಿಸಿ ವಿದ್ಯಾರ್ಥಿಗಳು ತಿದ್ದುಪಡಿ ಮಾಡಿಕೊಳ್ಳಬಹುದು.

ಈಗಾಗಲೇ ಅಂಕಪಟ್ಟಿಗಳನ್ನು ಮಂಡಳಿಯು ಬಿಇಒ ಕಚೇರಿಗೆ ಕಳುಹಿಸಿದೆ. ಶಾಲೆಯಲ್ಲಿ ಸಂಬಂಧಿಸಿದ ಶಾಲಾ ಮುಖ್ಯ ಶಿಕ್ಷಕರು ಹಸ್ತಾಂತರಿಸಿ ವಿದ್ಯಾರ್ಥಿಗಳಿಗೆ ತಕ್ಷಣ ವಿತರಿಸಲು ಸೂಚಿಸಲಾಗಿದೆ. ಯಾವುದೇ ಮಾಹಿತಿ ತಪ್ಪಾಗಿದ್ದರೆ ಅಕ್ಟೋಬರ್ 22 ವರೆಗೆ ಬದಲಾವಣೆ ಮಾಡಿಕೊಂಡು ಪರಿಷ್ಕೃತ ಅಂಕ ಪಟ್ಟಿ ಪಡೆದುಕೊಳ್ಳಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಂಕಪಟ್ಟಿ ಮಾಹಿತಿ ತಿದ್ದುಪಡಿಗೆ 200 ರೂಪಾಯಿ ಶುಲ್ಕ ನಿಗದಿ ಮಾಡಲಾಗಿದೆ. ಕಡ್ಡಾಯವಾಗಿ ಶಾಲಾ ಮುಖ್ಯ ಶಿಕ್ಷಕರೇ ಮಂಡಳಿಯ ನೆಫ್ಟ್ ಚಲನ್ ಮೂಲಕ ಶುಲ್ಕ ಪಾವತಿಸುವಂತೆ ತಿಳಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular