HomeLatest Newsಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಪರೀಕ್ಷೆ-1ಕ್ಕೆ ನೋಂದಾಯಿಸಲು ದಿನಾಂಕ ವಿಸ್ತರಣೆ

ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಪರೀಕ್ಷೆ-1ಕ್ಕೆ ನೋಂದಾಯಿಸಲು ದಿನಾಂಕ ವಿಸ್ತರಣೆ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2026ನೇ ಮಾರ್ಚ್ ಮಾಹೆಯಲ್ಲಿ ನಡೆಯಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆ-1ಕ್ಕೆ ಹಾಜರಾಗುವ ವಿದ್ಯಾರ್ಥಿಗಳನ್ನು ನೋಂದಾಯಿಸಲು ದಿನಾಂಕ ವಿಸ್ತರಣೆ ಮಾಡಿದೆ.

2026ನೇ ಮಾರ್ಚ್ ಮಾಹೆಯಲ್ಲಿ ನಡೆಯುವ ಎಸ್.ಎಸ್.ಎಲ್.ಸಿ ಪರೀಕ್ಷೆ-1ಕ್ಕೆ ರಾಜ್ಯದ ಸರ್ಕಾರಿ ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ ಅನುದಾನಿತ, ಅನುದಾನರಹಿತ ಶಾಲೆಗಳಿಂದ ಹಾಜರಾಗುವ ಅರ್ಹ ಶಾಲಾ ವಿದ್ಯಾರ್ಥಿಗಳು ಹಾಗೂ ಆನ್‌ಲೈನ್ ಮುಖಾಂತರ ನೇರವಾಗಿ ನೋಂದಾಯಿಸುವ ಖಾಸಗಿ ಅಭ್ಯರ್ಥಿಗಳು ಮತ್ತು ಎಲ್ಲಾ ವಿಧದ ಪುನರಾವರ್ತಿತ ಅಭ್ಯರ್ಥಿಗಳ ಮಾಹಿತಿಯನ್ನು ಆನ್‌ಲೈನ್ ಮುಖಾಂತರ ನೋಂದಾಯಿಸಲು ಅವಧಿಯನ್ನು ದಿನಾಂಕ:15.11.2025ರ ವರೆಗೆ ನಿಗಧಿಪಡಿಸಲಾಗಿತ್ತು.

ಆದರೆ, ರಾಜ್ಯದ ಕೆಲವು ಶಾಲೆಗಳಿಂದ ಹಾಗೂ ಪೋಷಕರಿಂದ ಮಂಡಳಿಗೆ ದೂರವಾಣಿಯ ಮುಖಾಂತರ ವಿದ್ಯಾರ್ಥಿಗಳ ನೋಂದಣಿ ಮಾಡಲು ದಿನಾಂಕವನ್ನು ಪುನ: ವಿಸ್ತರಿಸಲು ಕೋರಿಕೆಗಳು ಬಂದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ನೋಂದಣಿಗಾಗಿ ದಿನಾಂಕಗಳನ್ನು ವಿಸ್ತರಿಸಲಾಗಿದೆ. ಪುನ: ದಿನಾಂಕ ವಿಸ್ತರಣೆಯನ್ನು ಮಾಡಲಾಗುವುದಿಲ್ಲ. ಈ ಸಂಬಂಧ ವಿಸ್ತರಿಸಿರುವ ದಿನಾಂಕದವರೆಗೆ ವಿದ್ಯಾರ್ಥಿಗಳ ನೋಂದಣಿ ಮಾಡತಕ್ಕದ್ದು. ಈ ಕುರಿತು ತಮ್ಮ ವ್ಯಾಪ್ತಿಯಲ್ಲಿ ಬರುವ ಶಾಲಾ ಮುಖ್ಯೋಪಾಧ್ಯಾಯರ ಮುಖಾಂತರ ವಿದ್ಯಾರ್ಥಿಗಳ/ಪೋಷಕರ ಗಮನಕ್ಕೆ ತಂದು ಇದರ ಸದುಪಯೋಗವನ್ನು ಪಡೆದುಕೊಳ್ಳಲು ಸಂಬಂಧಿಸಿದ ಜಿಲ್ಲಾ ಉಪನಿರ್ದೇಶಕರು / ಕ್ಷೇತ್ರ ಶಿಕ್ಷಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಈ ಮೂಲಕ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular