ಬೆಂಗಳೂರು: ದಿನಾಂಕ:28-02-2026 ರಂದು ನಡೆಯುವ ಎಸ್.ಎಸ್.ಎಲ್.ಸಿ 3ನೇ ಪೂರ್ವಸಿದ್ಧತಾ ಪರೀಕ್ಷೆಯ ಸಮಾಜ ವಿಜ್ಞಾನ ವಿಷಯದ ಪರೀಕ್ಷಾ ಸಮಯ ಬದಲಾವಣೆ ಮಾಡಿರುವ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಸುತ್ತೋಲೆ ಹೊರಡಿಸಿದೆ.
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಶಾಲಾ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ 3ನೇ ಪೂರ್ವಸಿದ್ಧತಾ ಪರೀಕ್ಷೆಯನ್ನು ದಿನಾಂಕ:23-02-2026 ರಿಂದ ನಡೆಸಲು ಈಗಾಗಲೇ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.
ಆದರೆ, ದಿನಾಂಕ:28-02-2026 ರಂದು ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಇರುವುದರಿಂದ, ಸದರಿ ದಿನದಂದು ನಡೆಯುವ ಎಸ್.ಎಸ್.ಎಲ್.ಸಿ ಸಮಾಜ ವಿಜ್ಞಾನ ವಿಷಯದ ಪರೀಕ್ಷೆಯ ಸಮಯವನ್ನು ಬೆಳಗ್ಗೆ 10 ರ ಬದಲಾಗಿ ಅಪರಾಹ್ನ 2 ಗಂಟೆಯಿಂದ ನಡೆಸುವಂತೆ ಈ ಮೂಲಕ ಸೂಚಿಸಿದೆ.
ಸದರಿ ವಿಷಯದ ಪ್ರಶ್ನೆ ಪತ್ರಿಕೆಯನ್ನು ಅದೇ ದಿನ ಮಧ್ಯಾಹ್ನ 12.30ಕ್ಕೆ ಮಂಡಳಿಯಿಂದ ಶಾಲಾ ಲಾಗಿನ್‌ಗೆ ಅಪ್ಲೋಡ್ ಮಾಡಲಾಗುವುದು. ಶಾಲಾ ಲಾಗಿನ್‌ನಲ್ಲಿ ಡೌನ್ ಲೋಡ್ ಮಾಡಿ ಮುದ್ರಿಸಿಕೊಂಡು ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸುವುದು. ಉಳಿದಂತೆ ಇನ್ನುಳಿದ ವಿಷಯಗಳ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.
ಈ ವಿಷಯವನ್ನು ಎಲ್ಲಾ ಪ್ರೌಢಶಾಲಾ ಮುಖ್ಯ ಶಿಕ್ಷಕರು ತಮ್ಮ ಶಾಲಾ ಸೂಚನಾ ಫಲಕದಲ್ಲಿ ಪ್ರಕಟಿಸಲು ಹಾಗೂ ಎಲ್ಲಾ ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವ ಕುರಿತು ಜಿಲ್ಲಾ ಉಪನಿರ್ದೇಶಕರು(ಆಡಳಿತ) ರವರು ಕ್ರಮವಹಿಸಲು ತಿಳಿಸಿದೆ.


