BIG NEWS : ಶೇ.17 ರಷ್ಟು `ಮಧ್ಯಂತರ ಪರಿಹಾರ’ : ರಾಜ್ಯ ಸರ್ಕಾರಿ ನೌಕರರಿಗೆ ಮುಖ್ಯ ಮಾಹಿತಿ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ (State Government Employee) ಮಂಜೂರು ಮಾಡಿರುವ ಶೇ 17 ರಷ್ಟು ತಾತ್ಕಾಲಿಕ ಪರಿಹಾರವನ್ನು (Temporary solution) ಸ್ಥಳೀಯ ಸಂಸ್ಥೆಗಳು ಹಾಗೂ ವಿಶ್ವವಿದ್ಯಾಲಯಗಳು/ನಗರ ಸ್ಥಳೀಯ ಸಂಸ್ಥೆಗಳಿಗೆ ವಿಸ್ತರಿಸುವ ಬಗ್ಗೆ ಸ್ಪಷ್ಟಿಕರಣ ನೀಡಿ ರಾಜ್ಯ ಸರ್ಕಾರವು (State Government) ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರದ ನೀತಿ ನಿರ್ಣಯದಂತೆ 7ನೇ ರಾಜ್ಯ ವೇತನ ಆಯೋಗದ ಅಂತಿಮ ವರದಿಯನ್ನು ಕಾಯ್ದಿರಿಸಿ, ಉಲ್ಲೇಖಿತ ದಿನಾಂಕ:01-03-2023ರ ಆದೇಶದಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ/ನಿವೃತ್ತ ನೌಕರರಿಗೆ ದಿನಾಂಕ:01-04-2023ರಿಂದ ಜಾರಿಗೆ ಬರುವಂತೆ, ಮೂಲ ವೇತನದ/ಮೂಲ ಪಿಂಚಣಿಯ ಶೇ 17ರಷ್ಟು ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಿ ಆದೇಶವನ್ನು ಹೊರಡಿಸಲಾಗಿರುತ್ತದೆ.

ಆದುದರಿಂದ, ರಾಜ್ಯ ಸರ್ಕಾರಿ ನೌಕರರಿಗೆ/ನಿವೃತ್ತ ನೌಕರರಿಗೆ ತಾತ್ಕಾಲಿಕ ಪರಿಹಾರ ಭತ್ಯೆಯನ್ನು ಮಂಜೂರು ಮಾಡಿ ಹೊರಡಿಸಲಾದ ಉಲ್ಲೇಖಿತ ಆದೇಶಗಳಿಗೆ ಸ್ಪಷ್ಟಿಕರಣ ನೀಡಲಾಗಿದೆ.
i. ರಾಜ್ಯದಲ್ಲಿನ ನಗರ ಸ್ಥಳೀಯ ಸಂಸ್ಥೆಗಳು ಮತ್ತು ವಿಶ್ವವಿದ್ಯಾಲಯಗಳ ನೌಕರರ ಪ್ರಕರಣಗಳಲ್ಲಿ, ಮಧ್ಯಂತರ ಪರಿಹಾರ ಸೌಲಭ್ಯವನ್ನು ಮಂಜೂರು ಮಾಡುವುದರಿಂದ, ಉಂಟಾಗುವ ಹೆಚ್ಚುವರಿ ಆರ್ಥಿಕ ಹೊರೆಯನ್ನು ಅನ್ವಯಿಸುವ ಸಂಸ್ಥೆಗಳ ಸ್ವಂತ ನಿಧಿ (ಸಂಪನ್ಮೂಲ) ಗಳಿಂದ ಭರಿಸತಕ್ಕದ್ದು.

ii. ಸರ್ಕಾರದಿಂದ ಅನುದಾನ ಪಡೆಯುತ್ತಿರುವ ಶಿಕ್ಷಣ ಸಂಸ್ಥೆಗಳು (ಶಾಲಾ/ಕಾಲೇಜುಗಳು/ಪಾಲಿಟೆಕ್ನಿಕ್/ಇಂಜಿನಿಯರಿಂಗ್ ಕಾಲೇಜುಗಳು) ಸೇರಿದಂತೆ ಸ್ವಾಯತ್ತ ವೈದ್ಯಕೀಯ ಸಂಸ್ಥೆಗಳಲ್ಲಿ ರಾಜ್ಯ ವೇತನ ಶ್ರೇಣಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಖಾಯಂ ನೌಕರರಿಗೆ ಮಧ್ಯಂತರ ಪರಿಹಾರ ಭತ್ಯೆಯನ್ನು ಮಂಜೂರು ಮಾಡುವುದರಿಂದ, ಉಂಟಾಗುವ ವೆಚ್ಚವನ್ನು ಸರ್ಕಾರದ ಅನುದಾನದಡಿ ಭರಿಸತಕ್ಕದ್ದು.
i. ಗುತ್ತಿಗೆ ಹಾಗೂ ಹೊರ ಗುತ್ತಿಗೆ/ತಾತ್ಕಾಲಿಕ ನೇಮಕಾತಿಯಡಿ ಕಾರ್ಯನಿರ್ವಹಿಸುತ್ತಿರುವ ನೌಕರರು ಹಾಗೂ UGC/ICAR/AICTE ವೇತನ ಶ್ರೇಣಿ: ಕಾರ್ಯನಿರತ ನೌಕರರುಗಳಿಗೆ ಉಲ್ಲೇಖಿತ ಆದೇಶವು ಅನ್ವಯಿಸುವುದಿಲ್ಲ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read