HomeLatest Newsವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ಮೇ.7 ಮತ್ತು 8 ರಂದು ಕೃಷಿ ಪ್ರಾಯೋಗಿಕ ತರಬೇತಿ

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ಮೇ.7 ಮತ್ತು 8 ರಂದು ಕೃಷಿ ಪ್ರಾಯೋಗಿಕ ತರಬೇತಿ

ಚಿತ್ರದುರ್ಗ :   ಕೃಷಿ ವಿಶ್ವ ವಿದ್ಯಾಲಯದಲ್ಲಿ ನಾನಾ ವಿಭಾಗಗಳಲ್ಲಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಚಿತ್ರದುರ್ಗ ನಗರದ ಎ.ಪಿ.ಎಂ.ಸಿ ಆವರಣದಲ್ಲಿರುವ ಕೃಷಿ ತಂತ್ರಜ್ಞರ ಸಂಸ್ಥೆಯಲ್ಲಿ ಇದೇ ಮೇ 07 ಮತ್ತು 08ರಂದು ಪ್ರಾಯೋಗಿಕ ತರಬೇತಿ ಆಯೋಜಿಸಲಾಗಿದೆ.

ಕೃಷಿ, ತೋಟಗಾರಿಕೆ, ರೇಷ್ಮೆ ಸಸಿಗಳು, ಹಣ್ಣುತರಕಾರಿ, ಬಿತ್ತನೆ ಬೀಜಗಳು, ಆಹಾರ ಧಾನ್ಯ, ಕೃಷಿ ಪರಿಕರಗಳ ಬಗ್ಗೆ ತರಬೇತಿಯಲ್ಲಿ ಪರಿಚಯಿಸಲಾಗುವುದು. ರಾಜ್ಯ ಕೃಷಿ ಆಧಾರಿತ ವಿಶ್ವವಿದ್ಯಾನಿಲಯಗಳಲ್ಲಿ ಪ್ರವೇಶ ಬಯಸಿ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಕೃಷಿಕರ ಕೋಟಾದಡಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸುವ ಪ್ರಾಯೋಗಿಕ ಪರೀಕ್ಷೆಗೆ ಈ ತರಬೇತಿಯಿಂದ ಪ್ರಯೋಜನವಾಗಲಿದೆ.

ತರಬೇತಿ ಪಡೆಯಲು ಆಸಕ್ತಿಯುಳ್ಳವರು ಮೇ 06 ರೊಳಗಾಗಿ ಚಿತ್ರದುರ್ಗ ನಗರದ ಎಪಿಎಂಸಿ ಆವರಣದಲ್ಲಿರುವ ಕೃಷಿ ತಂತ್ರಜ್ಞರ ಸಂಸ್ಥೆಯಲ್ಲಿ ಹೆಸರುಗಳನ್ನು ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಐಎಟಿ ಅಧ್ಯಕ್ಷ ಬಿ.ಮಂಜುನಾಥ್ ಕೋರಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್ಚಿನ ಮಾಹಿತಿಗಾಗಿ ಕಾರ್ಯದರ್ಶಿ ದೂರವಾಣಿ ಸಂಖ್ಯೆ 9742455666, ಖಜಾಂಚಿ ದೂರವಾಣಿ ಸಂಖ್ಯೆ 8217403715 ಗೆ ಸಂಪರ್ಕಿಸಬಹುದು ಎಂದು ಕೃಷಿ ತಂತ್ರಜ್ಞರ ಸಂಸ್ಥೆ ಕಾರ್ಯದರ್ಶಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular