HomeKarnatakaBIG NEWS : ವಿದ್ಯಾರ್ಥಿಗಳು, ಶಿಕ್ಷಕರಿಗೆ ಮುಖ್ಯ ಮಾಹಿತಿ : ಚಂದನವಾಹಿನಿಯಲ್ಲಿ 'ರಸಪ್ರಶ್ನೆ' ಕಾರ್ಯಕ್ರಮ ವೀಕ್ಷಿಸುವಂತೆ...

BIG NEWS : ವಿದ್ಯಾರ್ಥಿಗಳು, ಶಿಕ್ಷಕರಿಗೆ ಮುಖ್ಯ ಮಾಹಿತಿ : ಚಂದನವಾಹಿನಿಯಲ್ಲಿ ‘ರಸಪ್ರಶ್ನೆ’ ಕಾರ್ಯಕ್ರಮ ವೀಕ್ಷಿಸುವಂತೆ ಶಿಕ್ಷಣ ಇಲಾಖೆ ಸೂಚನೆ

ಬೆಂಗಳೂರು : ದೂರದರ್ಶನ ಚಂದನವಾಹಿನಿಯಲ್ಲಿ ಪ್ರಸಾರವಾಗುವ ರಸಪ್ರಶ್ನೆ ಸ್ಪರ್ಧೆ ಕಾರ್ಯಕ್ರಮವನ್ನು ಶಾಲಾ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ವೀಕ್ಷಿಸುವಂತೆ ಕ್ರಮ ಕೈಗೊಳ್ಳುವಂತೆ ಸಮಗ್ರ ಶಿಕ್ಷಣ ಇಲಾಖೆಯ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.

2023-24ನೇ ಸಾಲಿನಲ್ಲಿ ಸಮಗ್ರ ಶಿಕ್ಷಣ ಕರ್ನಾಟಕ ಸಹಯೋಗದೊಂದಿಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ, ಬೆಂಗಳೂರು ರವರು ಸರ್ಕಾರಿ ಶಾಲೆಗಳಲ್ಲಿ 8 ರಿಂದ 10ನೇ ತರಗತಿಗಳಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಲ್ಲಿ ಆರ್ಥಿಕ ಸಾಕ್ಷರತೆಯ ಬಗ್ಗೆ ಅರಿವು ಮೂಡಿಸಲು ಶಾಲಾ, ಬ್ಲಾಕ್, ಜಿಲ್ಲಾ ಹಾಗೂ ರಾಜ್ಯ ಹಂತಗಳಲ್ಲಿ ರಸಪ್ರಶ್ನೆ ಸ್ಪರ್ಧೆಯನ್ನು ಹಮ್ಮಿಕೊಂಡು ವಿಜೇತ ವಿದ್ಯಾರ್ಥಿಗಳಿಗೆ ಪ್ರಶಸ್ತಿಗಳನ್ನು ನೀಡಿ ಪ್ರೋತ್ಸಾಹಿಸಲಾಗಿತ್ತು. ‘ರಾಜ್ಯ ಮಟ್ಟದ ರಸಪ್ರಶ್ನೆ ಸ್ಪರ್ಧೆಯನ್ನು ದಿನಾಂಕ: 05.07,2023ರಂದು ದೂರದರ್ಶನ ಚಂದನವಾಹಿನಿ ಬೆಂಗಳೂರು, ಇಲ್ಲಿ ನಡೆಸಲಾಯಿತು. ಈ ಸ್ಪರ್ಧೆಯನ್ನು ರಾಜ್ಯದ ಎಲ್ಲಾ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ವೀಕ್ಷಿಸುವಂತ ದಿನಾಂಕ:20.07.2023 ಹಾಗೂ ದಿನಾಂಕ:21.07.2023 ರಂದು ರಾತ್ರಿ 9.30ಕ್ಕೆ ಪ್ರಸಾರ ಮಾಡಲಾಗುವುದು.ರಾಜ್ಯದ ಎಲ್ಲಾ ಜಿಲ್ಲೆಗಳ ಉಪನಿರ್ದೇಶಕರು(ಆಡಳಿತ) ಹಾಗೂ ಉಪನಿರ್ದೇಶಕರು (ಅಭಿವೃದ್ಧಿ) ರವರು ತಮ್ಮ ಜಿಲ್ಲೆಯ ಎಲ್ಲಾ ಶಾಲೆಗಳ ಹಾಗೂ ವಸತಿ ನಿಲಯಗಳ ವಿದ್ಯಾರ್ಥಿಗಳು, ಶಿಕ್ಷಕರು, ದೂರದರ್ಶನ ಚಂದನವಾಹಿನಿಯಲ್ಲಿ ಪ್ರಸಾರವಾಗುವ ಈ ಕಾರ್ಯಕ್ರಮವನ್ನು ವೀಕ್ಷಿಸಿ ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಕ್ರಮ ಕೈಗೊಳ್ಳಲು ಸೂಚಿಸಿದೆ.

ಹಾಗೂ ಹಾಗೂ ಕಾರ್ಯಕ್ರಮ ಅನುಷ್ಠಾನಗೊಳಿಸಿದ ಬಗ್ಗೆ ಪತ್ರದೊಂದಿಗೆ ಲಗತ್ತಿಸಿರುವ ಅನುಬಂಧ-01ರಲ್ಲಿ ಮಾಹಿತಿಯನ್ನು ತಮ್ಮ ಸಹಿ ಹಾಗೂ ಮೊಹರಿನೊಂದಿಗೆ ರಾಜ್ಯ ಕಛೇರಿಯ ಇಮೇಲ್ ವಿಳಾಸ [email protected]ಗೆ ದಿನಾಂಕ:25.07.2023 ರೊಳಗೆ ಕಡ್ಡಾಯವಾಗಿ ಸಲ್ಲಿಸಲು ಸಮಗ್ರ ಶಿಕ್ಷಣ ಇಲಾಖೆಯ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular