ರಾಜ್ಯಾದ್ಯಂತ ಮೇ 29 ರಿಂದ ಶಾಲೆಗಳು ಆರಂಭವಾಗಲಿವೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಶನಿವಾರ ವಿಜಯಪುರ ಜಿಲ್ಲೆ ಮುದ್ದೇಬಿಹಾಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇ 29 ರಿಂದ ರಾಜ್ಯದ್ಯಂತ ಶಾಲೆ ಆರಂಭವಾಗಲಿದ್ದು, ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಸರ್ಕಾರಿ ಶಾಲೆಗಳಿಗೆ ತೆರಳಿ ವಿದ್ಯಾರ್ಥಿಗಳನ್ನು ಸ್ವಾಗತಿಸಲಿದ್ದಾರೆ ಎಂದು ಹೇಳಿದ್ದಾರೆ.
ಶಾಲೆಯ ಆರಂಭದ ದಿನವೇ ಎಲ್ಲ ಮಕ್ಕಳಿಗೆ ಸಮವಸ್ತ್ರ, ಪಠ್ಯಪುಸ್ತಕ ವಿತರಿಸಲಾಗುವುದು. ಶೂ, ಸಾಕ್ಸ್ ಗಳನ್ನು ಹಂತ ಹಂತವಾಗಿ ಶಾಲೆಯಲ್ಲಿ ವಿತರಿಸಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಲೆಗಳಲ್ಲಿ ಮಕ್ಕಳಿಗೆ ನೈತಿಕ ಶಿಕ್ಷಣ ನೀಡಲು ಸೂಚನೆ ನೀಡಿದ್ದಾರೆ. ಈ ವರ್ಷ ಪ್ರಾಥಮಿಕ, ಪೂರ್ವ ಪ್ರಾಥಮಿಕ, ಮಾಧ್ಯಮಿಕ, ಪ್ರೌಢಶಾಲೆ, ಪಿಯುಸಿ ಹಂತದಲ್ಲಿ ಮಕ್ಕಳಿಗೆ ಮೌಲ್ಯವುಳ್ಳ ಶಿಕ್ಷಣ ನೀಡುವ ಉದ್ದೇಶದಿಂದ ನೀತಿ ವಿಜ್ಞಾನ ಬೋಧಿಸಲಾಗುವುದು ಎಂದು ತಿಳಿಸಿದ್ದಾರೆ.