HomeLatest Newsವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ವೃತ್ತಿಪರ ಕೋರ್ಸ್ ಪ್ರವೇಶಕ್ಕೆ ಅರ್ಜಿ ಸಲ್ಲಿಕೆಗೆ ಫೆ. 16ರವರೆಗೆ ಅವಕಾಶ

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ವೃತ್ತಿಪರ ಕೋರ್ಸ್ ಪ್ರವೇಶಕ್ಕೆ ಅರ್ಜಿ ಸಲ್ಲಿಕೆಗೆ ಫೆ. 16ರವರೆಗೆ ಅವಕಾಶ

UGCET-26 -ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಅನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದ್ದು, ಫೆಬ್ರುವರಿ 16ರವರೆಗೆ ಅವಕಾಶ ನೀಡಲಾಗಿದೆ.

ಕೆಇಎ ವೆಬ್ ಸೈಟ್ ನಲ್ಲಿ ಲಿಂಕ್ (https://share.google/bAql9LD8CEadmAcck) ಬಿಡುಗಡೆ‌ ಮಾಡಿದ್ದು, ಅರ್ಜಿ ಶುಲ್ಕ ಪಾವತಿಸಲು ಫೆ.18 ಕೊನೆ ದಿನ.

ಅರ್ಜಿ ಸಲ್ಲಿಸಲು ಸಾಕಷ್ಟು ಸಮಯ ನೀಡಿರುವ ಕಾರಣ ಪೋಷಕರು/ ಅಭ್ಯರ್ಥಿಗಳು ಸಾವಧಾನದಿಂದ ಸಿಇಟಿ ಮಾಹಿತಿಯನ್ನು ಓದಿ, ಮನನ ಮಾಡಿಕೊಂಡ ನಂತರ ಅರ್ಜಿ ಭರ್ತಿ‌ ಮಾಡಬೇಕು. ಅಭ್ಯರ್ಥಿಗಳು ತಮಗೆ ಅನ್ವಯವಾಗುವ ಮೀಸಲಾತಿಗಳಿಗೆ ಪೂರಕವಾಗಿ ದಾಖಲೆಗಳನ್ನು ಸಿದ್ಧ ಮಾಡಿಟ್ಟುಕೊಂಡು ಅರ್ಜಿ ಭರ್ತಿ ಮಾಡಿ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಸಕ್ತ ಸಾಲಿನ ಅರ್ಜಿಯು ಆಧಾರ್ ಆಧಾರಿತ ಅರ್ಜಿಯಾಗಿದ್ದು, ಅದರಲ್ಲಿನ ಹೆಸರು ಇತ್ಯಾದಿ ಅಂಶಗಳು ತನ್ನಿಂತಾನೆ ಅರ್ಜಿಯಲ್ಲಿ ಬಂದು ಕೂರಲಿವೆ. ಇದಲ್ಲದೆ, ಇ-ಮೇಲ್ ಮೂಲಕವೂ ಓಟಿಪಿ ಜತೆಗೆ ಪ್ರತಿ‌ ಹಂತದ ಮಾಹಿತಿಯನ್ನು ತಿಳಿಸುವ ವಿಶೇಷ ವ್ಯವಸ್ಥೆಯನ್ನು ಮಾಡಲಾಗಿದೆ. ವಾಟ್ಸ್ ಅಪ್ ಮೂಲಕವೂ ಸಂದೇಶಗಳು ರವಾನೆಯಾಗಲಿವೆ.

ಆರ್ಜಿ ಭರ್ತಿ ಸಂಬಂಧ ಎಲ್ಲ ಕಾಲೇಜು ಸಿಬ್ಬಂದಿಗೆ ಹತ್ತು ದಿನಗಳ ಆನ್ ಲೈನ್ ತರಬೇತಿ ನೀಡಲಾಗಿದೆ. ಹೀಗಾಗಿ ಅಭ್ಯರ್ಥಿಗಳು ತಮ್ಮ ಕಾಲೇಜುಗಳಲ್ಲಿಯೇ ಅರ್ಜಿ ಭರ್ತಿ ಮಾಡಿ, ಸಲ್ಲಿಸಬಹುದು. ಅಗತ್ಯಬಿದ್ದಾಗ ಉಪನ್ಯಾಸಕರ ನೆರವು ಪಡೆಯಬಹುದು.

ಹೆಚ್ಚಿನ ಮಾಹಿತಿಗೆ KEA ವೆಬ್ ಸೈಟ್ ನೋಡುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular