ಬೆಂಗಳೂರು: ಸ್ನಾತಕೋತ್ತರ ಪದವಿ ಕೋರ್ಸ್ ಗಳ 2025- 26ನೇ ಸಾಲಿನ ಎಂಬಿಎ, ಎಂಸಿಎ, ಎಂಟೆಕ್, ಎಂಇ ಪ್ರವೇಶದ ಪಿಜಿಸಿಇಟಿ ಹಾಗೂ ಲ್ಯಾಟರಲ್ ಎಂಟ್ರಿ ಮೂಲಕ ಇಂಜಿನಿಯರಿಂಗ್ ಕೋರ್ಸ್ ಪ್ರವೇಶಕ್ಕೆ ನಡೆಸುವ ಡಿಸಿಇಟಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಪಿಜಿಸಿಇಟಿ ಮತ್ತು ಡಿಸಿಇಟಿ ಪರೀಕ್ಷೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಮೇ 10 ಕೊನೆಯ ದಿನವಾಗಿದೆ. ಶುಲ್ಕ ಪಾವತಿಸಲು ಮೇ 12 ಕೊನೆಯ ದಿನವಾಗಿದೆ. ಪಿಜಿಸಿಇಟಿಯನ್ನು ಮೇ ಕೊನೆ ಅಥವಾ ಜೂನ್ ಮೊದಲ ವಾರದಲ್ಲಿ ಡಿಸಿಇಟಿಯನ್ನು ಮೇ 31 ರಂದು ನಡೆಸಲು ತೀರ್ಮಾನಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.
ಪಿಜಿ ಆರ್ಕಿಟೆಕ್ಚರ್ ಕೋರ್ಸ್ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪ್ರವೇಶ ಪರೀಕ್ಷೆ ನಡೆಸುವುದಿಲ್ಲ. ಬದಲಿಗೆ ಆರ್ಕಿಟೆಕ್ಚರ್ ಕೌನ್ಸಿಲ್ ನಡೆಸುವ ರಾಷ್ಟ್ರಮಟ್ಟದ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನೇ ಇಲ್ಲಿ ಸೀಟು ಹಂಚಿಕೆಗೆ ಪರಿಗಣಿಸಲಾಗುವುದು. ಆದರೆ ಅವರು ಕೂಡ ಈಗ ಅರ್ಜಿ ಸಲ್ಲಿಸಬೇಕು ಎಂದು ಕೆಇಎ ನಿರ್ದೇಶಕರು ಮಾಹಿತಿ ನೀಡಿದ್ದಾರೆ.