ಬೆಂಗಳೂರು: 2026- 27ನೇ ಶೈಕ್ಷಣಿಕ ವರ್ಷದ ಇಂಜಿನಿಯರಿಂಗ್ ಕೋರ್ಸ್ ಗಳ ಪ್ರವೇಶಕ್ಕೆ ಮೇ 9ರಂದು ಕಾಮೆಡ್ -ಕೆ ಪ್ರವೇಶ ಪರೀಕ್ಷೆ ನಡೆಯಲಿದೆ.
ದೇಶಾದ್ಯಂತ 200 ನಗರಗಳ 400ಕ್ಕೂ ಹೆಚ್ಚು ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ರಾಜ್ಯದ ಖಾಸಗಿ ಅನುದಾನಿತ ಇಂಜಿನಿಯರಿಂಗ್ ಕಾಲೇಜುಗಳಿಗೆ ಪ್ರವೇಶ ಪಡೆದುಕೊಳ್ಳಬಹುದು.
ಕಾಮೆಡ್ –ಕೆ ಪ್ರವೇಶ ಪರೀಕ್ಷೆಗೆ ಫೆಬ್ರವರಿ 3ರಂದು ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಮಾರ್ಚ್ 16 ಕೊನೆಯ ದಿನವಾಗಿದೆ. ಹೆಚ್ಚಿನ ವಿವರಗಳಿಗಾಗಿ www.comedk.org, www.unigauge.com ವೆಬ್ಸೈಟ್ ಗಮನಿಸಬಹುದಾಗಿದೆ.

