HomeLatest NewsBREAKING: ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಎಸ್.ಎಸ್.ಎಲ್.ಸಿ., ದ್ವಿತೀಯ ಪಿಯುಸಿ ಪರೀಕ್ಷೆ-1 ಮತ್ತು 2ರ ತಾತ್ಕಾಲಿಕ ವೇಳಾಪಟ್ಟಿ...

BREAKING: ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಎಸ್.ಎಸ್.ಎಲ್.ಸಿ., ದ್ವಿತೀಯ ಪಿಯುಸಿ ಪರೀಕ್ಷೆ-1 ಮತ್ತು 2ರ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಬೆಂಗಳೂರು: 2026ರ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ ಪರೀಕ್ಷೆ-1 ಮತ್ತು 2ರ ತಾತ್ಕಾಲಿಕ ವೇಳಾಪಟ್ಟಿಗಳನ್ನು ಮಂಡಲಿಯ ಜಾಲತಾಣದಲ್ಲಿ www.kseab.karnataka.gov.in ದಿನಾಂಕ: 20.09.2025ರಂದು ಪ್ರಕಟಿಸಲಾಗಿದೆ.

ಎಲ್ಲಾ ಪ್ರೌಢಶಾಲಾ ಮುಖ್ಯ ಶಿಕ್ಷಕರು ಹಾಗೂ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರುಗಳು ಸದರಿ ವೇಳಾಪಟ್ಟಿಗಳನ್ನು ಮಂಡಲಿಯ ಜಾಲತಾಣದಿಂದ ಡೌನ್‌ ಲೋಡ್ ಮಾಡಿಕೊಂಡು ತಮ್ಮ ಶಾಲಾ/ಕಾಲೇಜು ಸೂಚನಾ ಫಲಕದಲ್ಲಿ ಪ್ರಕಟಿಸಲು ಹಾಗೂ ಎಲ್ಲಾ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲು ತಿಳಿಸಿದೆ.

ಮಂಡಳಿಯಿಂದ ಪ್ರಕಟಿಸಿರುವ 2026ರ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿ.ಯು.ಸಿ ಪರೀಕ್ಷೆ-1 ಮತ್ತು 2ರ ತಾತ್ಕಾಲಿಕ ವೇಳಾಪಟ್ಟಿಗಳಿಗೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು ದಿನಾಂಕ: 20.09.2025 ರಿಂದ 09.10.2025ರವರೆಗೆ ಕಾಲಾವಕಾಶವನ್ನು ನೀಡಲಾಗಿರುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಕ್ಷೇಪಣೆಗಳನ್ನು ಮಂಡಲಿಯ ಇ-ಮೇಲ್ ವಿಳಾಸ: [email protected] ಗೆ ಹಾಗೂ ಹಾರ್ಡ್ ಪ್ರತಿಯನ್ನು ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ, 6ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು-560003 ಇಲ್ಲಿಗೆ ನಿಗದಿತ ಸಮಯದೊಳಗೆ ಕಳುಹಿಸುವುದು. ನಿಗದಿಪಡಿಸಿರುವ ಕೊನೆಯ ದಿನಾಂಕದ ನಂತರ ಬರುವ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸುವುದಿಲ್ಲ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular