HomeLatest Newsವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಏ. 7ರಂದು ಪಿಯುಸಿ, ಏ. 24ರಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ ಸಾಧ್ಯತೆ

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಏ. 7ರಂದು ಪಿಯುಸಿ, ಏ. 24ರಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ ಸಾಧ್ಯತೆ

ಬೆಂಗಳೂರು: ಫೆಬ್ರವರಿ 28ರಿಂದ ಮಾರ್ಚ್ 17ರ ವರೆಗೆ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ -1ರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಮುಕ್ತಾಯವಾಗಿದ್ದು, ಏಪ್ರಿಲ್ 7ರಂದು ಫಲಿತಾಂಶ ಪ್ರಕಟಿಸುವ ಸಾಧ್ಯತೆ ಇದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷ ಪ್ರಕಾಶ್ ನಿಟ್ಟಾಲಿ ಮಾಹಿತಿ ನೀಡಿ, ಈಗಾಗಲೇ ಮೌಲ್ಯಮಾಪನ ಕಾರ್ಯ ಮುಕ್ತಾಯವಾಗಿದೆ. ಫಲಿತಾಂಶ ಬಿಡುಗಡೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಿದ್ದು, ಶೀಘ್ರದಲ್ಲೇ ಅಧಿಕೃತವಾಗಿ ಫಲಿತಾಂಶದ ದಿನಾಂಕ ಪ್ರಕಟಿಸಲಾಗುವುದು ಎಂದು ಹೇಳಿದ್ದಾರೆ.

ಈ ಬಾರಿ 7 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಪಿಯುಸಿ ಪರೀಕ್ಷೆ-1 ಬರೆದಿದ್ದು, ಮಾರ್ಚ್ 22 ರಿಂದ ಮೌಲ್ಯಮಾಪನ ಕಾರ್ಯ ಶುರುವಾಗಿತ್ತು. ಪರೀಕ್ಷಾ ಮಂಡಳಿ ಈಗಾಗಲೇ ತಿಳಿಸಿದ್ದ ಸಂಭಾವ್ಯ ದಿನಾಂಕದಂತೆ ಏಪ್ರಿಲ್ 7ರಂದು ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎಸ್ಎಸ್ಎಲ್ಸಿ ಪರೀಕ್ಷೆ -1 ಮುಕ್ತಾಯವಾಗಿದ್ದು ಏಪ್ರಿಲ್ 5ರಿಂದ 20ರವರೆಗೆ ಮೌಲ್ಯಮಾಪನ ಕಾರ್ಯ ನಡೆಯಲಿದೆ. ಮಂಡಳಿಯ ತಾತ್ಕಾಲಿಕ ವೇಳಾಪಟ್ಟಿಯಂತೆ ಏಪ್ರಿಲ್ 24ರಂದು ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ನಿರೀಕ್ಷೆ ಇದೆ.

ಈ ಬಾರಿ ಎಂಟು ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವೆಬ್ಸೈಟ್ ನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಕೀ ಉತ್ತರ ಪ್ರಕಟಿಸಲಾಗಿದೆ. ಆಕ್ಷೇಪಣೆ ಸಲ್ಲಿಕೆಗೆ ಅವಕಾಶ ನೀಡಲಾಗಿದ್ದು, ಏಪ್ರಿಲ್ 5ರೊಳಗೆ ಆಕ್ಷೇಪಣೆ ಸಲ್ಲಿಸಬಹುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಿರ್ದೇಶಕರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular