HomeLatest Newsವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶ ಪರೀಕ್ಷೆ ಫಲಿತಾಂಶ ಪ್ರಕಟ

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶ ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು: ಅಲ್ಪಸಂಖ್ಯಾತರ ನಿರ್ದೆಶನಾಲಯದ ವಿವಿಧ ವಸತಿ ಶಾಲೆಗಳ 6ನೇ ತರಗತಿ ದಾಖಲಾತಿಗಾಗಿ ನಡೆಸಲಾದ ಪ್ರವೇಶ ಪರೀಕ್ಷೆಯ ಫಲಿತಾಂಶ ಬಿಡುಗಡೆ ಮಾಡಲಾಗಿದೆ.

ಅಲ್ಪಸಂಖ್ಯಾತರ ನಿರ್ದೇಶನಾಲಯದ ಉಲ್ಲೇಖಿತ ಪ್ರವೇಶಾತಿ ಅಧಿಸೂಚನೆಯಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ಇಲಾಖೆಯ ವಿವಿಧ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಾತಿಗೆ ಸಂಬಂಧ ಸೇವಾಸಿಂಧು ಪೋರ್ಟಲ್ ಮೂಲಕ ಆನ್-ಲೈನ್ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು.

ಅದರಂತೆ ಅರ್ಜಿ ಸಲ್ಲಿಸಿದ ಅರ್ಹ ವಿದ್ಯಾರ್ಥಿಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ದಿನಾಂಕ:27.04.2025 ರಂದು ನಡೆಸಲಾಗಿದೆ. ಪ್ರಸ್ತುತ ಸದರಿ ಪ್ರವೇಶ ಪರಿಕ್ಷೆಯ ಫಲಿತಾಂಶವನ್ನು ದಿನಾಂಕ:22.05.2025ರಂದು ಪ್ರಕಟಿಸಲಾಗಿದ್ದು, ಪರೀಕ್ಷೆ ಬರೆದ ಎಲ್ಲಾ ವಿದ್ಯಾರ್ಥಿಗಳು https://dom.karnataka.gov.in https://domgok.in ತಮ್ಮ SATS ಸಂಖ್ಯೆಯನ್ನು ನಮೂದಿಸಿ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular