ಶಿವಮೊಗ್ಗ : ಕೆವಿಟಿಎಸ್‌ಡಿಸಿ ನಿಗಮವು ಅಂತರಾಷ್ಟ್ರೀಯ ನೇಮಕಾತಿ ಏಜೆನ್ಸಿಯಾಗಿ ಕಾರ್ಯ ನಿರ್ವಹಿಸುತ್ತಿದ್ದು, ರಾಜ್ಯದ ವಿದ್ಯಾರ್ಥಿಗಳಿಗೆ ಜಾಗತಿಕ ಉನ್ನತ ಶಿಕ್ಷಣದ ಅವಕಾಶಗಳನ್ನು ಪರಿಚಯಿಸುವ ಉದ್ದೇಶದಿಂದ ಆ.17 ರ ಭಾನವಾರದಂದು ವಿದೇಶದಲ್ಲಿ ಅಧ್ಯಯನ ಕಾರ್ಯಕ್ರಮವನ್ನು ಬೆಂಗಳೂರಿನ ದಿ ಲಲಿತ್ ಅಶೋಕ ಹೋಟೆಲ್‌ನಲ್ಲಿ ಆಯೋಜಿಸಿದೆ.
ಈ ಕಾರ್ಯಕ್ರಮದಲ್ಲಿ 10 ಕ್ಕೂ ಹೆಚ್ಚು ವಿದೇಶಗಳ 60 ವಿಶ್ವವಿದ್ಯಾಲಯಗಳು ಭಾಗವಹಿಸುತ್ತಿದ್ದು ಉನ್ನತ ಶಿಕ್ಷಣಕ್ಕಾಗಿ ವಿದೇಶಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ವಿದೇಶಿ ಅಧ್ಯಯನದ ಅವಕಾಶಗಳು, ಪ್ರವೇಶ ಪ್ರಕ್ರಿಯೆ, ವಿರ್ದ್ಯಾರ್ಥಿ ವೀಸಾ ಮಾಹಿತಿ ಮತ್ತು ವಿದ್ಯಾರ್ಥಿವೇತನದ ಬಗ್ಗೆ ಮಾಹಿತಿಯನ್ನು ಒಂದೇ ವೇದಿಕೆಯಡಿ ಒದಗಿಸುವ ಅವಕಾಶ ಕಲ್ಪಿಸಲಾಗುತ್ತಿದೆ.
ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್ https://studyroad.ksdckarnataka.com ಮೂಲಕ ನೋಂದಾಯಿಸಿಕೊAಡು ಮಾಹಿತಿ ಶಿಬಿರದಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗೆ ದೂ.ಸಂ: 7338674791, 7338674794, 7338674798, 7338674792 ನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಹೆಚ್ ಎಂ ಸುರೇಶ್ ತಿಳಿಸಿದ್ದಾರೆ.