BIG NEWS : `SSLC ಪೂರಕ ಪರೀಕ್ಷೆ’ ಬರೆದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ

ಬೆಂಗಳೂರು : ಎಸ್ಎಸ್ ಎಲ್ ಸಿ ಪೂರಕ ಪರೀಕ್ಷೆ (SSLC Supplementary Exam) ಬರೆದ ವಿದ್ಯಾರ್ಥಿಗಳಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಮಹತ್ವದ ಮಾಹಿತಿ ನೀಡಿದ್ದು, ಎಸ್ಎಸ್ ಎಲ್ ಸಿ ಪೂರಕ ಪರೀಕ್ಷೆಯ ಕೀ ಉತ್ತರಗಳನ್ನು (Key Answer) ಪ್ರಕಟಿಸಿದ್ದು, ಆಕ್ಷೇಪಣೆ ಸಲ್ಲಿಸಲು ಇಂದು ಸಂಜೆ 5.30 ರವರೆಗೆ ಅವಕಾಶ ನೀಡಲಾಗಿದೆ.

ಎಸ್ಎಸ್ ಎಲ್ ಸಿ ಪೂರಕ ಪ್ರಶ್ನೆಪತ್ರಿಕೆಗಳ ಕೀ ಉತ್ತರಗಳನ್ನು ಮಂಡಳಿಯ ಅಂತರ್ಜಾಲದಲ್ಲಿ ಪ್ರಕಟಿಸಿ, ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.ಜೂನ್ -2023ರ ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆಯ ಕೀ ಉತ್ತರಗಳನ್ನು ಮಂಡಳಿಯ ಅಂತರ್ಜಾಲದಲ್ಲಿ ಪ್ರಕಟಿಸಲಾಗಿದೆ. ಕೀ ಉತ್ತರಗಳಿಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಿಗೆ ಆಕ್ಷೇಪಣೆಗಳಿದ್ದಲ್ಲಿ ದಿನಾಂಕ: 19.06.2023ರ ಸಂಜೆ 5:30 ಗಂಟೆಯೊಳಗೆ ಆನ್ಲೈನ್ ಮೂಲಕ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ನಿಗದಿತ ಸಮಯದ ನಂತರ ಸಲ್ಲಿಸಿದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ. ವಿದ್ಯಾರ್ಥಿಗಳು ಆಕ್ಷೇಪಣೆಗಳಿದ್ದಲ್ಲಿ https://kseab.karnataka.gov.in ವೆಬ್ ಸೈಟ್ ನಲ್ಲಿ ಸಲ್ಲಿಸಬಹುದಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read