
ಎಸ್ಎಸ್ ಎಲ್ ಸಿ ಪೂರಕ ಪ್ರಶ್ನೆಪತ್ರಿಕೆಗಳ ಕೀ ಉತ್ತರಗಳನ್ನು ಮಂಡಳಿಯ ಅಂತರ್ಜಾಲದಲ್ಲಿ ಪ್ರಕಟಿಸಿ, ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.ಜೂನ್ -2023ರ ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆಯ ಕೀ ಉತ್ತರಗಳನ್ನು ಮಂಡಳಿಯ ಅಂತರ್ಜಾಲದಲ್ಲಿ ಪ್ರಕಟಿಸಲಾಗಿದೆ. ಕೀ ಉತ್ತರಗಳಿಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಿಗೆ ಆಕ್ಷೇಪಣೆಗಳಿದ್ದಲ್ಲಿ ದಿನಾಂಕ: 19.06.2023ರ ಸಂಜೆ 5:30 ಗಂಟೆಯೊಳಗೆ ಆನ್ಲೈನ್ ಮೂಲಕ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ನಿಗದಿತ ಸಮಯದ ನಂತರ ಸಲ್ಲಿಸಿದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ. ವಿದ್ಯಾರ್ಥಿಗಳು ಆಕ್ಷೇಪಣೆಗಳಿದ್ದಲ್ಲಿ https://kseab.karnataka.gov.in ವೆಬ್ ಸೈಟ್ ನಲ್ಲಿ ಸಲ್ಲಿಸಬಹುದಾಗಿದೆ.

