ವರ್ಗಾವಣೆ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಮುಖ್ಯ ಮಾಹಿತಿ: ತಾಂತ್ರಿಕ ಕಾರಣದಿಂದ ಕೌನ್ಸೆಲಿಂಗ್ ಮುಂದೂಡಿಕೆ

ಬೆಂಗಳೂರು: ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ಅನ್ನು ತಾಂತ್ರಿಕ ಕಾರಣಗಳಿಂದಾಗಿ ಶಾಲಾ ಶಿಕ್ಷಣ ಇಲಾಖೆ ಮುಂದೂಡಿದೆ.

ಮುಂದಿನ ಎಲ್ಲಾ ರೀತಿಯ ಕೌನ್ಸೆಲಿಂಗ್ ದಿನಾಂಕವನ್ನು ಪರಿಷ್ಕೃತ ವೇಳಾಪಟ್ಟಿಯಲ್ಲಿ ನಂತರ ತಿಳಿಸಲಾಗುವುದು ಎಂದು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರಿಗೆ ಸೂಚಿಸಿದೆ. ಶಿಕ್ಷಣ ಇಲಾಖೆಯ ಪರಿಷ್ಕೃತ ವೇಳಾಪಟ್ಟಿ 3ರ ಪ್ರಕಾರ ಗುರುವಾರ ನಡೆಯಬೇಕಿದ್ದ ನಿರ್ದಿಷ್ಟ ಹುದ್ದೆಗಳ ಗರಿಷ್ಠ ಅವಧಿ ಪೂರೈಸಿ ಹೊರಹೋಗುವವರ ಕೌನ್ಸೆಲಿಂಗ್ ಅನ್ನು ತಾಂತ್ರಿಕ ಕಾರಣದಿಂದ ಮುಂದೂಡಲಾಗಿದೆ. ಮುಂದಿನ ಕೌನ್ಸೆಲಿಂಗ್ ದಿನಾಂಕಗಳನ್ನು ಪರಿಷ್ಕೃತ ವೇಳಾಪಟ್ಟಿಯ ಪ್ರಕಾರ ಪ್ರಕಟಿಸಲಾಗುವುದು ಎಂದು ಹೇಳಲಾಗಿದೆ.

ಪ್ರಮಾಣ ಪತ್ರ ನೈಜತೆ ಪರಿಶೀಲನೆ

ವರ್ಗಾವಣೆಯಲ್ಲಿ ವಿಭಾಗಮಟ್ಟದಲ್ಲಿ ಮತ್ತು ಅಂತರ್ ವಿಭಾಗ ಮಟ್ಟದಲ್ಲಿ ಕೋರಿಕೆ ವರ್ಗಾವಣೆಗೆ ಅರ್ಜಿ ಸಲ್ಲಿಸಿರುವ ಪ್ರಾಥಮಿಕ ಶಾಲಾ ಸಹ ಶಿಕ್ಷಕರು, ಮುಖ್ಯ ಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು ಮತ್ತು ವಿಶೇಷ ಶಿಕ್ಷಕರು ಹಾಗೂ ಪ್ರೌಢಶಾಲಾ ಸಹಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು ಮತ್ತು ವಿಶೇಷ ಶಿಕ್ಷಕರು ತೀವ್ರತರ ಖಾಯಿಲೆ ಪ್ರಕರಣಗಳು ಮತ್ತು అంగవిశల ಪ್ರಕರಣದಡಿ ಆದ್ಯತೆ ಸಲ್ಲಿಸಿರುವ ಮೂಲ ದಾಖಲೆಗಳ(ವೈದ್ಯಕೀಯ ಪ್ರಮಾಣ ಪತ್ರಗಳು) ಉಲ್ಲೇಖಿತ ಪತ್ರಗಳನ್ವಯ ನೈಜತೆ ಪರಿಶೀಲನೆಯಾಗಬೇಕಿರುತ್ತದೆ.

ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪ್ರಾಥಮಿಕ ಮತ್ತು ಪ್ರೌಢಶಾಲಾ ವೃಂದದ ಶಿಕ್ಷಕರುಗಳು ತೀವ್ರತರ ಖಾಯಿಲೆ ಪ್ರಕರಣಗಳು ಮತ್ತು ಅಂಗವಿಕಲ ಪ್ರಕರಣದಡಿ ಆದ್ಯತೆ ಕೋರಿ ಅರ್ಜಿ ಸಲ್ಲಿಸಿದ್ದಲ್ಲಿ ಅಂತಹ ಶಿಕ್ಷಕರ ಮೂಲ ವೈದ್ಯಕೀಯ ಪ್ರಮಾಣ ಪತ್ರಗಳನ್ನು ದಾಖಲೆಗಳೊಂದಿಗೆ ಸಲ್ಲಿಸಲು ತಿಳಿಸಿದೆ. ಅನಗತ್ಯ ವಿಳಂಬವಾದಲ್ಲಿ ಸಂಬಂಧಿಸಿದ ಉಪನಿರ್ದೇಶಕರು(ಆಡಳಿತ) ರವರನ್ನೇ ನೇರ ಹೊಣೆ ಮಾಡಲಾಗುವುದು ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read