HomeLatest Newsವರ್ಗಾವಣೆ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಮುಖ್ಯ ಮಾಹಿತಿ: ಸಾಮಾನ್ಯ ವರ್ಗಾವಣೆಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ವರ್ಗಾವಣೆ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಮುಖ್ಯ ಮಾಹಿತಿ: ಸಾಮಾನ್ಯ ವರ್ಗಾವಣೆಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಬೆಂಗಳೂರು: 2024-25ನೇ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ವೃಂದ/ತತ್ಸಮಾನ ವೃಂದದ ಶಿಕ್ಷಕರು ಹಾಗೂ ಮುಖ್ಯೋಪಾಧ್ಯಾಯರು ಮತ್ತು ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರು/ತತ್ಸಮಾನ ವೃಂದ, ದೈಹಿಕ ಶಿಕ್ಷಣ ಶಿಕ್ಷಕರು ಮತ್ತು ವಿಶೇಷ ಶಿಕ್ಷಕರು ಹಾಗೂ ಸರ್ಕಾರಿ ಪ್ರೌಢಶಾಲಾ ಮುಖ್ಯಶಿಕ್ಷಕರು/ತತ್ಸಮಾನ ವೃಂದದ ಅಧಿಕಾರಿಗಳ ಸಾಮಾನ್ಯ ವರ್ಗಾವಣೆಗಳನ್ನು ಹಮ್ಮಿಕೊಳ್ಳುವ ಕುರಿತು ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಲಾಗಿದೆ.

ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು [ಶಿಕ್ಷಕರ ವರ್ಗಾವಣೆ ನಿಯಂತ್ರಣ] ಅಧಿನಿಯಮ-2020 [2020ರ ಕರ್ನಾಟಕ ಅಧಿನಿಯಮ ಸಂಖ್ಯೆ:04] ಹಾಗೂ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು [ಶಿಕ್ಷಕರ ವರ್ಗಾವಣೆ ನಿಯಂತ್ರಣ] ನಿಯಮಗಳು-2020ರ ಹಾಗೂ ವರ್ಗಾವಣಾ ತಿದ್ದುಪಡಿ ಕಾಯ್ದೆ ಮತ್ತು ನಿಯಮಗಳು-2022ರ ಪ್ರಕಾರ ಶಾಲಾ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರನ್ನು ಒಳಗೊಂಡಂತೆ ವೇಳಾಪಟ್ಟಿ ಪ್ರಕಟಿಸಲಾಗಿದೆ.

ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ವೃಂದ/ತತ್ಸಮಾನ ವೃಂದದ ಶಿಕ್ಷಕರು ಮತ್ತು ಸರ್ಕಾರಿ ಪ್ರೌಢ ಶಾಲಾ ಸಹ ಶಿಕ್ಷಕರು/ತತ್ಸಮಾನ ವೃಂದ, ದೈಹಿಕ ಶಿಕ್ಷಣ ಶಿಕ್ಷಕರು ಮತ್ತು ವಿಶೇಷ ಶಿಕ್ಷಕರು ಹಾಗೂ ಸರ್ಕಾರಿ ಪ್ರೌಢ ಶಾಲಾ ಮುಖ್ಯಶಿಕ್ಷಕರು/ತತ್ಸಮಾನ ವೃಂದದ ಅಧಿಕಾರಿಗಳಿಗೆ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆಗೆ ವರ್ಗಾವಣಾ ನಿಯಮ-2020ರ ನಿಯಮ-6 ರಲ್ಲಿ ನಿಗದಿಪಡಿಸಿರುವಂತೆ ವರ್ಗಾವಣೆ(ಅನುಸೂಚಿ) ವಿಸ್ತ್ರತವಾದ ಮಾರ್ಗಸೂಚಿಗಳನ್ನೊಳಗೊಂಡಂತೆ ವೇಳಾಪಟ್ಟಿಯನ್ನು ಉಲ್ಲೇಖಿತ ಅಧಿಸೂಚನೆಯಂತೆ ಹೊರಡಿಸಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದಿನಾಂಕ: 24/09/2025ರಲ್ಲಿನ ಪ್ರಕಟಣೆಯಲ್ಲಿ ತಿಳಿಸಿರುವಂತೆ ವರ್ಗಾವಣೆ ಕೌನ್ಸಿಲಿಂಗ್ ಪ್ರಕ್ರಿಯೆಯನ್ನು ಆಡಳಿತಾತ್ಮಕ ಕಾರಣಗಳ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು. ಮುಂದುವರಿದು ಈ ಕೆಳಕಂಡ ಅನುಬಂಧ-2ರಲ್ಲಿರುವಂತೆ ಸಂತೆ ವೇಳಾಪಟ್ಟಿಯನ್ನು ಪರಿಷ್ಕರಿಸಲಾಗಿದ್ದು ಉಳಿದಂತೆ ಉಲ್ಲೇಖಿತ ವರ್ಗಾವಣಾ ಅಧಿಸೂಚನೆಯಲ್ಲಿರುವ ಅನುಬಂಧ-1 ರಲ್ಲಿನ ಎಲ್ಲಾ ಮಾರ್ಗಸೂಚಿ ಅಂಶಗಳು ಯಥಾವತ್ತಾಗಿ ಮುಂದುವರೆಯುತ್ತವೆ. ಈ ಪರಿಷ್ಕೃತ ವೇಳಾಪಟ್ಟಿಯ ಜೊತೆಯಲ್ಲಿ ಸದರಿ ಮಾರ್ಗಸೂಚಿ ಅಂಶಗಳನ್ನು ಓದಿಕೊಳ್ಳತಕ್ಕದ್ದು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular