HomeKarnatakaGruha Jyoti Scheme : ರಾಜ್ಯದ ಜನತೆಗೆ ಮುಖ್ಯ ಮಾಹಿತಿ : ಉಚಿತ ವಿದ್ಯುತ್ ಗೆ...

Gruha Jyoti Scheme : ರಾಜ್ಯದ ಜನತೆಗೆ ಮುಖ್ಯ ಮಾಹಿತಿ : ಉಚಿತ ವಿದ್ಯುತ್ ಗೆ ನಾಳೆಯಿಂದಲೇ ಅರ್ಜಿ ಸಲ್ಲಿಸಿ

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವದ ಯೋಜನೆಯಲ್ಲಿ ಒಂದಾದ ಗೃಹಜ್ಯೋತಿ ಯೋಜನೆಗೆ ನಾಳೆಯಿಂದಲೇ ( ಜೂನ್ 15) ಅರ್ಜಿ ಸಲ್ಲಿಸಬಹುದಾಗಿದೆ.

ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಮಾಸಿಕ 200 ಯೂನಿಟ್ ಒಳಗಿನ ವಿದ್ಯುತ್ ಬಳಕೆ ಮಾಡುವವರು ಅರ್ಜಿ ಸಲ್ಲಿಸಬಹುದಾಗಿದೆ.

ಜೂನ್ 15 ರಿಂದ ಜುಲೈ 5 ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದ್ದು, ರಾಜ್ಯದಲ್ಲಿ 2.14 ಕೋಟಿ ಜನರು ಇದರ ಪ್ರಯೋಜನ ಪಡೆಯಲಿದ್ದಾರೆ. ಅರ್ಜಿ ಸಲ್ಲಿಸುವವರು ಆರ್ ಆರ್ ನಂಬರ್ ಜೊತೆ ಆಧಾರ್ ನಂಬರ್ ಕಡ್ಡಾಯವಾಗಿ ನಮೂದಿಸಬೇಕು. ಬಾಡಿಗೆ ಮನೆಯಲ್ಲಿರುವವರಿಗೆ ಮನೆ ಕರಾರು ಪತ್ರ ಅಥವಾ ವೋಟರ್ ಐಡಿ ಕಡ್ಡಾಯವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗೃಹಜ್ಯೋತಿ ಯೋಜನೆಯಡಿ ಎಲ್ಲರಿಗೂ 200 ಯೂನಿಟ್ ಉಚಿತ ವಿದ್ಯುತ್ ನೀಡಲಾಗುತ್ತದೆ. ಇದು ಸ್ವಂತ ಮನೆ ಹಾಗೂ ಬಾಡಿಗೆದಾರರಿಗೂ ಅನ್ವಯವಾಗಲಿದ್ದು, ಫ್ರೀ ವಿದ್ಯುತ್ ಗೆ ದಾಖಲೆಗಳನ್ನು ಸಲ್ಲಿಸಬೇಕು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದರು. ಗೃಹಜ್ಯೋತಿ ಯೋಜನೆ ಹೆಸರಿನಲ್ಲಿಯೇ ಬೆಸ್ಕಾಂ ಹೆಡ್ ಆಫೀಸ್ ನಲ್ಲಿ ಆಪ್ ಸಿದ್ಧವಾಗುತ್ತಿದೆ. ಸ್ಮಾರ್ಟ್ ಫೋನ್ ಗಳಲ್ಲಿಯೂ ಗೃಹಜ್ಯೋತಿ ಆಪ್ ಲಭ್ಯವಾಗಲಿದೆ ಎಂದು ಹೇಳಿದ್ದರು.
ಎಲ್ಲಾ ಆಪ್ ಗಳಂತೆ ಪ್ಲೇ ಸ್ಟೋರ್, ಆಪಲ್ ಸ್ಟೋರ್ ಗಳಲ್ಲಿಯೂ ಗೃಹಜ್ಯೋತಿ ಆಪ್ ಲಭ್ಯವಿರಲಿದ್ದು, ಅಪ್ಲಿಕೇಷನ್ ಡೌನ್ ಲೋಡ್ ಮಾಡಿಕೊಂಡು ಅರ್ಜಿ ತುಂಬಬೇಕು. ಆಧಾರ್ ಕಾರ್ಡ್, ಆರ್.ಆರ್. ನಂಬರ್ ಗೆ ಲಿಂಕ್ ಆಗಬೇಕು. ಸ್ವಂತ ಮನೆ ಇರಲಿ, ಬಾಡಿಗೆ ಮನೆಯಿರಲಿ ಕರಾರು ಪತ್ರದ ದಾಖಲೆ ಇರಬೇಕು. ಬಾಡಿಗೆದಾರು ಕರಾರು ಪತ್ರ ಇಲ್ಲದಿದ್ದರೆ ವೋಟರ್ ಐಡಿ ಪ್ರತಿ ಸಲ್ಲಿಸಬೇಕು. ಸೇವಾ ಸಿಂಧು ಆಪ್ ಮೂಲಕವೂ ಅರ್ಜಿ ಸಲ್ಲಿಸಬಹುದಾಗಿದೆ.

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular