ಯುಜಿಸಿಇಟಿ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಆಪ್ಷನ್ ಎಂಟ್ರಿ ದಿನಾಂಕ ವಿಸ್ತರಣೆ

ಬೆಂಗಳೂರು: ಯುಜಿಸಿಇಟಿ ಅಭ್ಯರ್ಥಿಗಳಿಗೆ ವೃತ್ತಿಪರ ಕೋರ್ಸ್ ಸೀಟುಗಳ ಆಪ್ಷನ್ ಎಂಟ್ರಿ ದಿನಾಂಕವನ್ನು ಜುಲೈ 15 ರಿಂದ 18ರವರೆಗೆ ವಿಸ್ತರಿಸಲಾಗಿದೆ.

ಸರ್ವರ್ ಸಮಸ್ಯೆ ಹಿನ್ನೆಲೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಪ್ರಸಕ್ತ ಸಾಲಿನ ಯುಜಿಸಿಇಟಿ ಅಭ್ಯರ್ಥಿಗಳಿಗೆ ಆಪ್ಷನ್ ಎಂಟ್ರಿ ದಿನಾಂಕ ವಿಸ್ತರಿಸಲಾಗಿದೆ. ಸರ್ವರ್ ಸಮಸ್ಯೆಯ ಕಾರಣಕ್ಕೆ ಲಾಗಿನ್ ಆಗಿ ಆಪ್ಷನ್ಸ್ ಎಂಟ್ರಿ ಮಾಡಲು ಕೊಂಚ ವಿಳಂಬವಾಗುತ್ತಿತ್ತು. ಇದನ್ನು ಪರಿಗಣಿಸಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ದಿನಾಂಕ ವಿಸ್ತರಿಸಿದೆ.

ಇಂಜಿನಿಯರಿಂಗ್, ಪಶು ವೈದ್ಯಕೀಯ, ಪಶು ಸಂಗೋಪನೆ, ಕೃಷಿ ವಿಜ್ಞಾನ, ಅಲೈಡ್ ಹೆಲ್ತ್ ಸೈನ್ಸ್ ಕೋರ್ಸ್ ಗಳಿಗೆ ಸೀಟು ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳು ಯಾವುದೇ ಆತಂಕಕ್ಕೆ ಒಳಗಾಗದೆ ಪ್ರಕ್ರಿಯೆ ಪೂರ್ಣಗೊಳಿಸಲು ಅವಕಾಶ ಬಳಸಿಕೊಳ್ಳುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.

ಕಾಲೇಜುಗಳು ಮತ್ತು ಕೋರ್ಸ್ ಗಳ ಪಟ್ಟಿಯನ್ನು ಅಭ್ಯರ್ಥಿಗಳು ಆದ್ಯತೆಯ ಕ್ರಮದಲ್ಲಿ ಬಿಳಿ ಕಾಗದದಲ್ಲಿ ಮುಂಚಿತವಾಗಿಯೇ ಬರೆದು ಸಿದ್ದಪಡಿಸಿಕೊಂಡು ನಂತರ ಪೋರ್ಟಲ್ ನಲ್ಲಿ ಆಪ್ಷನ್ ಎಂಟ್ರಿ ನಮೂದಿಸಬೇಕು ಎಂದು ಹೇಳಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read