ಬೆಂಗಳೂರು : ‘KPSC’ ಸದಸ್ಯರನ್ನು ನೇಮಕ ಮಾಡಲು ಸಮಿತಿ ರಚನೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ದಿನಾಂಕ: 14/03/2025 ರಂದು ನಡೆದ ಮೇಲೆ ಓದಲಾದ ಕ್ರ.ಸಂ (2) ರಲ್ಲಿನ ಸಚಿವ ಸಂಪುಟ ಸಭೆಯ ಪ್ರಕರಣ ಸಂಖ್ಯೆ: ಸಿ.180/2025ರಲ್ಲಿ ಶ್ರೀ ಪಿ.ಸಿ. ಹೋಟಾ ಸಮಿತಿಯ ಶಿಫಾರಸ್ಸಿನ ಕಂಡಿಕೆ-65ರನ್ನಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ವ್ಯಾಪಕ ಆಧಾರಿತ ಹುಡುಕಾಟ ಸಮಿತಿಯನ್ನು ರಚಿಸಲು ಸಚಿವ ಸಂಪುಟವು ಅನುಮೋದಿಸಿರುತ್ತದೆ.
ಅದರಂತೆ, ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷರು ಮತ್ತು ಸದಸ್ಯರ ನೇಮಕಾತಿಗಾಗಿ ಸದಸ್ಯರ ಹೆಸರನ್ನು ಸರ್ಕಾರಕ್ಕೆ ಶಿಫಾರಸ್ಸು ಮಾಡುವ ಉದ್ದೇಶಕ್ಕಾಗಿ, ಒಂದು ವ್ಯಾಪಕ ಆಧಾರಿತ ಹುಡುಕಾಟ ಸಮಿತಿ ರಚನೆ ಮಾಡಲು ಸರ್ಕಾರವು ನಿರ್ಧರಿಸಿ ಕೆಳಕಂಡಂತೆ ಆದೇಶಿಸಿದೆ.ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷರು ಮತ್ತು ಸದಸ್ಯರ ನೇಮಕಾತಿಗಾಗಿ ಸಮಗ್ರತೆ, ನ್ಯಾಯಸಮ್ಮತತೆ ಮತ್ತು ಭೌದ್ಧಿಕ ಸಾಮರ್ಥ್ಯದ ದಾಖಲೆ ಹೊಂದಿರುವ ವ್ಯಕ್ತಿಗಳ ಹೆಸರನ್ನು ಸರ್ಕಾರಕ್ಕೆ ಸೂಚಿಸುವ ಉದ್ದೇಶಕ್ಕಾಗಿ, ಸರ್ಕಾರದ ಮುಖ್ಯಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಈ ಕೆಳಕಂಡ ಸದಸ್ಯರನ್ನು ಒಳಗೊಂಡಿರುವ ವ್ಯಾಪಕ ಆಧಾರಿತ ಹುಡುಕಾಟ ಸಮಿತಿಯನ್ನು ಸರ್ಕಾರವು ರಚಿಸಿದೆ.


