ಬೆಂಗಳೂರು : ರಾಜ್ಯದಲ್ಲಿ ಹೊಸದಾಗಿ ‘ವಿಶೇಷ ಕಾರ್ಯಪಡೆ’ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಕರ್ನಾಟಕ ರಾಜ್ಯದಲ್ಲಿ ಹೊಸದಾಗಿ ವಿಶೇಷ ಕಾರ್ಯಪಡೆ (Special Action Force)ಯನ್ನು ಕೆಳಕಂಡಂತೆ ಸ್ಥಾಪಿಸಲು ಮಂಜೂರಾತಿ ನೀಡಿ ಆದೇಶಿಸಿದೆ.
- ರಾಜ್ಯದಲ್ಲಿನ ನಕ್ಸಲ್ ನಿಗ್ರಹ ಪಡೆ (Anti Naxal Force)ಯಲ್ಲಿ ಪ್ರಸ್ತುತ ಇರುವ ವಿವಿಧ ದರ್ಜೆಯ ಒಟ್ಟು 656 ಹುದ್ದೆಗಳಲ್ಲಿ ಕೆಳಕಂಡ ಅಧಿಕಾರಿ/ಸಿಬ್ಬಂದಿಗಳ ಹುದ್ದೆಗಳನ್ನು ಬೇರ್ಪಡಿಸಿ, ಪ್ರತ್ಯೇಕವಾಗಿ ವಿಶೇಷ ಕಾರ್ಯಪಡೆಯನ್ನು ಸ್ಥಾಪಿಸಿದೆ.
- ಹೊಸದಾಗಿ ಸ್ಥಾಪನೆಯಾಗುವ ವಿಶೇಷ ಕಾರ್ಯಪಡೆಯು ಮೂರು ಕಂಪನಿಗಳನ್ನು ಹೊಂದಿರಲಿದ್ದು, ಈ ಕಂಪನಿಗಳನ್ನು ಉಡುಪಿ, ಶಿವಮೊಗ್ಗ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸ್ಥಾಪಿಸುವುದು ಹಾಗೂ ಸದರಿ ವಿಶೇಷ ಕಾರ್ಯಪಡೆ (Special Action Force)ಯ ಕರ್ತವ್ಯಗಳು ಮತ್ತು ಜವಾಬ್ದಾರಿಗಳು ಕೆಳಕಂಡಂತೆ ಇರುತ್ತದೆ.






You Might Also Like
TAGGED:ವಿಶೇಷ ಕಾರ್ಯಪಡೆ'