HomeLatest Newsರಾಜ್ಯದ ಜೈಲುಗಳ ಸುಧಾರಣೆಗೆ ಮಹತ್ವದ ಕ್ರಮ: ಹೈಪವರ್ ಕಮಿಟಿಯಿಂದ ತಿಹಾರ್ ಜೈಲು ಸೇರಿ ವಿವಿಧೆಡೆ ಪರಿಶೀಲನೆ

ರಾಜ್ಯದ ಜೈಲುಗಳ ಸುಧಾರಣೆಗೆ ಮಹತ್ವದ ಕ್ರಮ: ಹೈಪವರ್ ಕಮಿಟಿಯಿಂದ ತಿಹಾರ್ ಜೈಲು ಸೇರಿ ವಿವಿಧೆಡೆ ಪರಿಶೀಲನೆ

ಬೆಂಗಳೂರು: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಪವರ್ ಕಮಿಟಿಯಿಂದ ಬೇರೆ ಬೇರೆ ಜೈಲುಗಳಲ್ಲಿ ಪರಿಶೀಲನೆ ನಡೆಸಲಾಗುವುದು.

ರಾಜ್ಯ ಕಾರಾಗೃಹಗಳ ಸುಧಾರಣೆಗೆ ಸರ್ಕಾರ ರಚಿಸಿರುವ ಸಮಿತಿ ಬೇರೆ ಬೇರೆ ಜೈಲುಗಳಲ್ಲಿ ಪರಿಶೀಲಿಸಲಿದೆ. ದೆಹಲಿಯ ತಿಹಾರ್ ಜೈಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ. ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ನೇತೃತ್ವದ ಉನ್ನತ ಮಟ್ಟದ ಸಮಿತಿ ತಿಹಾರ್ ಜೈಲಿನಲ್ಲಿ ಕೈಗೊಂಡ ಸುಧಾರಣಾತ್ಮಕ ಅಂಶಗಳ ಬಗ್ಗೆ ಅಧ್ಯಯನ ನಡೆಸಲಿದೆ.

ಆಡಳಿತ, ತಾಂತ್ರಿಕವಾಗಿ ತಿಹಾರ್ ಜೈಲು ಆಡಳಿತ ಜಾರಿ ತಂದಿರುವ ಅಂಶ, ಬಂಧಿಗಳಿಗೆ ರೂಪಿಸಿರುವ ಕಾರ್ಯಕ್ರಮಗಳ ಕುರಿತು ಅಧ್ಯಯನ ನಡೆಸಲಿದೆ. ಮಂಗಳೂರು ಮತ್ತು ಕಲಬುರಗಿ ಜೈಲಿಗೆ ಸಹ ತೆರಳಿ ಪರಿಶೀಲನೆ ನಡೆಸಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎಲ್ಲಾ ಕಾರಾಗೃಹಗಳಿಗೆ ತೆರಳಿ ಅಧ್ಯಯನಕ್ಕೆ ಸಮಿತಿ ಮುಂದಾಗಿದೆ. ವ್ಯವಸ್ಥೆಯಲ್ಲಿರುವ ಲೋಪ ದೋಷ, ಸಿಬ್ಬಂದಿ ಕೊರತೆ, ಜೈಲಿನ ಸಾಮರ್ಥ್ಯಕ್ಕೆ ಅನುಗುಣವಾಗಿ ಬಂಧಿಗಳ ಸಂಖ್ಯೆ, ಆಧುನಿಕ ತಂತ್ರಜ್ಞಾನ ಬಳಸಿ ಕಾರ್ಯನಿರ್ವಹಣೆ ಇನ್ನಿತರ ಅಂಶಗಳ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸಲು ನಿರ್ಧರಿಸಲಾಗಿದೆ, ಇತ್ತೀಚೆಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಕ್ರಮ ನಡೆದಿತ್ತು. ಜೈಲಿನಲ್ಲಿ ಕೈದಿಗಳು ಮೊಬೈಲ್ ಬಳಸುತ್ತಿರುವ ವಿಡಿಯೋ ವೈರಲ್ ಆಗಿತ್ತು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular