HomeKarnatakaಬಾಲ್ಯವಿವಾಹ ಮುಕ್ತ ರಾಜ್ಯವಾಗಿಸಲು ಮಹತ್ವದ ಕ್ರಮ: ಹೆಚ್ಚುವರಿ ಇಲಾಖೆಗಳ ಸೇರ್ಪಡೆ

ಬಾಲ್ಯವಿವಾಹ ಮುಕ್ತ ರಾಜ್ಯವಾಗಿಸಲು ಮಹತ್ವದ ಕ್ರಮ: ಹೆಚ್ಚುವರಿ ಇಲಾಖೆಗಳ ಸೇರ್ಪಡೆ

ಬಾಲ್ಯ ವಿವಾಹ ಮುಕ್ತ ರಾಜ್ಯವನ್ನಾಗಿಸುವ ಹಿನ್ನೆಲೆಯಲ್ಲಿ ಮತ್ತು ಬಾಲ್ಯವಿವಾಹಗಳನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ದೃಷ್ಠಿಯಿಂದ ವಿವಿಧ ಇಲಾಖೆಗಳನ್ನು ಹೆಚ್ಚುವರಿಯಾಗಿ ಬಾಲ್ಯವಿವಾಹ ನಿಷೇಧಾಧಿಕಾರಿಗಳನ್ನಾಗಿ ಸೇರ್ಪಡೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಅದರಂತೆ ಹೆಚ್ಚುವರಿ ಬಾಲ್ಯ ವಿವಾಹ ನಿಷೇಧಾಧಿಕಾರಿಗಳನ್ನಾಗಿ ಎಲ್ಲ ಸರ್ಕಾರಿ ಮಕ್ಕಳ ಪಾಲನಾ ಸಂಸ್ಥೆಗಳ ಅಧೀಕ್ಷಕರು, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ, ಅಲ್ಪ ಸಂಖ್ಯಾತರ ಕಲ್ಯಾಣ, ಸಮಾಜ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘಗಳ ವಸತಿ ಸಹಿತ/ರಹಿತ ನಿಲಯದ ಎಲ್ಲಾ ನಿಲಯ ಪಾಲಕರು ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಎಲ್ಲಾ ಶಾಲಾ ಶಿಕ್ಷಕರನ್ನು ಸೇರ್ಪಡೆಗೊಳಿಸಲಾಗಿದೆ.

ಆದ್ದರಿಂದ ಇನ್ನುಮುಂದೆ ಕೊಪ್ಪಳ ಜಿಲ್ಲೆಯಲ್ಲಿ ಬಾಲ್ಯವಿವಾಹಗಳನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ಮೂಲಕ ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತವನ್ನಾಗಿಸುವ ಕಡೆ ಕ್ರಮ ವಹಿಸುವಂತೆ ಮತ್ತು  ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ವಿರುದ್ಧ ಸರ್ವೋಚ್ಛ ನ್ಯಾಯಾಲಯದ ನಿರ್ದೇಶನದಂತೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ವಿಶೇಷ ಸೂಚನೆ ನೀಡಿದ್ದಾರೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸಿಂಧು ಅಂಗಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular