HomeLatest Newsಅನ್ನಭಾಗ್ಯ ಅಕ್ಕಿ ಕಾಳಸಂತೆಯಲ್ಲಿ ಮಾರಾಟ ತಡೆಗೆ ಮಹತ್ವದ ಕ್ರಮ: ನ್ಯಾಯಬೆಲೆ ಅಂಗಡಿ, ಇತರೆಡೆ ಸಿಸಿ ಕ್ಯಾಮರಾ...

ಅನ್ನಭಾಗ್ಯ ಅಕ್ಕಿ ಕಾಳಸಂತೆಯಲ್ಲಿ ಮಾರಾಟ ತಡೆಗೆ ಮಹತ್ವದ ಕ್ರಮ: ನ್ಯಾಯಬೆಲೆ ಅಂಗಡಿ, ಇತರೆಡೆ ಸಿಸಿ ಕ್ಯಾಮರಾ ಅಳವಡಿಕೆ ಕಡ್ಡಾಯ

ಅನ್ನಭಾಗ್ಯ ಅಕ್ಕಿ ಕಾಳಸಂತೆಯಲ್ಲಿ ಮಾರಾಟ ಮಾಡುವುದನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಮತ್ತು ಎಫ್‍ಐಆರ್ ದಾಖಲಿಸಬೇಕೆಂದು ಅಧಿಕಾರಿಗಳಿಗೆ ದಾವಣಗೆರೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಸೂಚಿಸಿದರು.

 ಶನಿವಾರ(ಅ.18) ರಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಿವಿಧ ಇಲಾಖೆಗಳೊಂದಿಗೆ ಅನ್ನಭಾಗ್ಯ ಅಕ್ಕಿ ಕಾಳಸಂತೆಯಲ್ಲಿ ಮಾರಾಟ ಆಗುತ್ತಿರುವ ಕುರಿತು ಆಯೋಜಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಧ್ಯವರ್ತಿಗಳು ಹಣದ ಆಮಿಷವೊಡ್ಡಿ ಬಡವರಿಂದ ಅಕ್ಕಿ ಖರೀದಿಸುತ್ತಿದ್ದಾರೆ. ಮನೆ–ಮನೆಗೆ ಹೋಗಿ ಕಡಿಮೆ ದುಡ್ಡಿಗೆ ಅಕ್ಕಿ ಸಂಗ್ರಹಿಸುವ ದಂಧೆಕೋರರು, ಅದನ್ನು ರಾಜ್ಯದ ಗಡಿಯಾಚೆ ಮಾರುತ್ತಿದ್ದಾರೆ. ನ್ಯಾಮತಿ  ತಾಲ್ಲೂಕುಗಳಲ್ಲಿ ಅತಿ ಹೆಚ್ಚಾಗಿ ನ್ಯಾಯಬೆಲೆ ಅಂಗಡಿಯಿಂದ ಅಕ್ಕಿಯೂ ಕಾಳಸಂತೆಯಲ್ಲಿ ಮಾರಾಟವಾಗುತ್ತಿದ್ದು, ಅದನ್ನು ಹೊರದೇಶಗಳಿಗೆ, ರವಾನೆಯಾಗುತ್ತಿದೆ. ಗಂಜಿ ಮಾಡಲು ತೆಗೆದುಕೊಂಡು ಹೋಗುತ್ತಿದ್ದಾರೆ. ನಗರದ ಪ್ರಮುಖ ಪ್ರದೇಶಗಳಲ್ಲಿ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಬೇಕು. ರಾಜ್ಯದಲ್ಲಿ ಬಡವರಿಗೆ ಅನ್ನಭಾಗ್ಯ ಯೋಜನೆಯಡಿ ಉಚಿತವಾಗಿ ನೀಡುತ್ತಿರುವ ಅಕ್ಕಿಯನ್ನು ಫಲಾನುಭವಿಗಳಿಂದ ಕಡಿಮೆ ಬೆಲೆಗೆ ಖರೀದಿಸಿ ಹೊರ ಜಿಲ್ಲೆಗಳಿಗೆ ಸಾಗಿಸುವ ಬಡವರ ಹೊಟ್ಟೆ ತುಂಬಿಸಬೇಕಿದ್ದ ಅನ್ನಭಾಗ್ಯದ ಅಕ್ಕಿ ವ್ಯವಸ್ಥಿತವಾಗಿ ರೈಸ್ ಮಿಲ್‍ಗಳ ಗೋಡೌನ್ ಸೇರುತ್ತಿದೆ ಎಂದರು.

  ಟ್ರಾನ್ಸ್ ಪೋರ್ಟ್ ವಾಹನಗಳಿಗೆ ಜಿಪಿಎಸ್ ಅಳವಡಿಸಬೇಕು. ಅನ್ನಭಾಗ್ಯದ ಸ್ಟಾಕ್ ಬಂದ ತಕ್ಷಣ ಅದನ್ನು ವಾಟ್ಸಾಪ್ ಗ್ರೂಪ್ ನಲ್ಲಿ  ವಿಡಿಯೋ ಅಳವಡಿಸಬೇಕು. ಸಾರ್ವಜನಿಕರು ನ್ಯಾಯಬೆಲೆ ಅಂಗಡಿ ಅಥವಾ ಇನ್ನಾವುದೇ ಪ್ರದೇಶಗಳಲ್ಲಿ ಅನ್ನಭಾಗ್ಯ ಕಾಳಸಂತೆಯಲ್ಲಿ ಮಾರಾಟವಾಗುತ್ತಿರುವುದು ಕಂಡುಬಂದರೆ ಕೂಡಲೇ 112ಗೆ ಕರೆಮಾಡಿ ತಿಳಿಸಬೇಕು. ಅಕ್ರಮವಾಗಿ ಆಟೋ, ಗೂಡ್ಸ್ ಗಾಡಿಗಳಲ್ಲಿ ಅಕ್ಕಿಯನ್ನು ಖರಿದೀಸುತ್ತಿದ್ದು, ಅಂತಹ ವಾಹನಗಳಿಗೆ ದಂಡ ವಿಧಿಸಬೇಕೆಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದಾವಣಗೆರೆ  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಪರಮೇಶ್ವರ ಹೆಗಡೆ, ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಉಪವಿಭಾಗಾಧಿಕಾರಿ ಸಂತೋಷ್, ಗ್ರಾಮೀಣ ಪೊಲೀಸ್ ಠಾಣೆಯ ಡಿವೈಎಸ್‍ಪಿ ಬಸವರಾಜ,  ಆಹಾರ ಇಲಾಖೆಯ ಜಂಟಿ ನಿರ್ದೇಶಕ ಮಧುಸೂದನ್ ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular