ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ತಡೆಗೆ ಮಹತ್ವದ ಕ್ರಮ : ಆಂತರಿಕ ದೂರು ಸಮಿತಿ ರಚನೆ ಕಡ್ಡಾಯ

ಕೆಲಸದ ಸ್ಥಳಗಳಲ್ಲಿ ಮಹಿಳಾ ಸಿಬ್ಬಂದಿಗಳ ಮೇಲೆ ಲೈಂಗಿಕ ದೌರ್ಜನ್ಯ ತಡೆಗೆ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದ್ದು, ಕಚೇರಿಗಳಲ್ಲಿ ಆಂತರಿಕ ದೂರು ಸಮಿತಿ ರಚನೆ ಮಾಡುವುದು ಕಡ್ಡಾಯವಾಗಿದೆ.  

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲೆ ನಡೆಯುವ ಲೈಂಗಿಕ ಕಿರುಕುಳ ತಡೆಯಲು ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ (ತಡೆಗಟ್ಟುವಿಕೆ, ನಿಷೇಧಿಸುವಿಕೆ, ನಿವಾರಿಸುವಿಕೆ) 2013 ಅಧಿನಿಯಮಕ್ಕೆ ಸಂಬಂಧಿಸಿದಂತೆ ಸರ್ಕಾರದ ಆದೇಶದನ್ವಯ 10 ಅಥವಾ ಅದಕ್ಕಿಂತ ಹೆಚ್ಚು ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿರುವ ಸರ್ಕಾರಿ/ಖಾಸಗಿ ಕಛೇರಿಗಳು, ಕಾರ್ಖಾನೆಗಳು, ಗಾರ್ಮೆಂಟ್ಸ್ ಫ್ಯಾಕ್ಟರಿಗಳು, ವಿಶ್ವವಿದ್ಯಾಲಯಗಳು, ಸಂಘ-ಸಂಸ್ಥೆಗಳು ಹಾಗೂ ಜಿಲ್ಲೆ ತಾಲ್ಲೂಕು ಮತ್ತು ಗ್ರಾಮ ಪಂಚಾಯತ್ ಮಟ್ಟದಲ್ಲಿ ಬರುವ ಸರ್ಕಾರಿ/ಖಾಸಗಿ ಸಂಸ್ಥೆಗಳಲ್ಲಿ, ಉನ್ನತ ಮಟ್ಟದ ವೃತ್ತಿಪರರ ಶಾಸನಬದ್ದ ಸಂಸ್ಥೆಗಳು ಮತ್ತು ನಿಯಂತ್ರಿಸುವವರನ್ನು ಒಳಗೊಂಡAತೆ (ವೈದ್ಯರು, ವಕೀಲರು, ವಾಸ್ತುಶಿಲ್ಪಿಗಳು, ಲೆಕ್ಕ ಪರಿಶೋಧಕರು, ವೆಚ್ಚ ಲೆಕ್ಕ ಪರಿಶೋಧಕರು, ಇಂಜಿನಿಯರ್‌ಗಳು, ಬ್ಯಾಂರ‍್ಸ್ ಮತ್ತು ಇತರೇ ವೃತ್ತಿಪರರು) ಆಂತರಿಕ ದೂರು ಸಮಿತಿಯನ್ನು ರಚಿಸುವುದು ಕಡ್ಡಾಯವಾಗಿರುತ್ತದೆ.

ಆಂತರಿಕ ದೂರು ಸಮಿತಿಯಲ್ಲಿ ಹಿರಿಯ ಮಹಿಳಾ ಅಧಿಕಾರಿಯನ್ನು ಅಧ್ಯಕ್ಷರನ್ನಾಗಿ ಹಾಗೂ ಸಮಿತಿಯ ಸದಸ್ಯರುಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳಿಗೆ ಸೇರಿದ ಸದಸ್ಯರು ಹಾಗೂ ಕಡ್ಡಾಯವಾಗಿ ಎನ್.ಜಿ.ಒ. ಪ್ರತಿನಿಧಿಯನ್ನು ನೇಮಿಸಿಕೊಳ್ಳಬೇಕು. ಸಮಿತಿಯ ಸದಸ್ಯರುಗಳಲ್ಲಿ ಒಬ್ಬರು ಕಾನೂನಿನ ಪರಿಣತರಾಗಿರಬೇಕು. ಪ್ರತಿ 3 ವರ್ಷಗಳಿಗೊಮ್ಮೆ ಆಂತರಿಕ ದೂರು ಸಮಿತಿಯನ್ನು ಪುನರ್‌ರಚಿಸಬೇಕು. ಆಂತರಿಕ ದೂರು ಸಮಿತಿಯನ್ನು ಕಡ್ಡಾಯವಾಗಿ ರಚಿಸಿ, ವರದಿಯನ್ನು ಉಪನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಡುಪಿ ಕಚೇರಿಗೆ ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read