ರೈತರು, ಮಹಿಳೆಯರು, ಸಾಮಾನ್ಯ ಜನರ ಜೀವನ ಸುಧಾರಣೆ: GST ದರ ಕಡಿತ ಬಗ್ಗೆ ಪ್ರಧಾನಿ ಮೋದಿ ಟ್ವೀಟ್

ನವದೆಹಲಿ: ಜಿ.ಎಸ್.ಟಿ. ದರ ಪರಿಷ್ಕರಣೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. ಕೇಂದ್ರ ಮತ್ತು ರಾಜ್ಯಗಳನ್ನು ಒಳಗೊಂಡ ಜಿ.ಎಸ್.ಟಿ. ಕೌನ್ಸಿಲ್ ಸಭೆ ಕೇಂದ್ರಕ್ಕೆ ಸಲ್ಲಿಸಿದ ಪ್ರಸ್ತಾವನೆಗೆ ಸಾಮೂಹಿಕವಾಗಿ ಒಪ್ಪಿಗೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಸಾಮಾನ್ಯ ಜನರು, ರೈತರು, ಎಂಎಸ್ಎಂಇಗಳು, ಮಧ್ಯಮ ವರ್ಗ, ಮಹಿಳೆಯರು, ಯುವಕರಿಗೆ ಪ್ರಯೋಜನವನ್ನು ನೀಡುವ ಜಿ.ಎಸ್.ಟಿ. ದರ ಕಡಿತ ಮತ್ತು ಸುಧಾರಣೆಗಳ ಕುರಿತ ಪ್ರಸ್ತಾವನೆಗಳಿಗೆ ಸಾಮೂಹಿಕವಾಗಿ ಒಪ್ಪಿಗೆ ನೀಡಲಾಗಿದೆ. ವ್ಯಾಪಕ ಶ್ರೇಣಿಯ ಸುಧಾರಣೆಗಳು ನಮ್ಮ ನಾಗರಿಕರ ಜೀವನವನ್ನು ಸುಧಾರಿಸುತ್ತದೆ. ಎಲ್ಲರಿಗೂ ವಿಶೇಷವಾಗಿ ಸಣ್ಣ ವ್ಯಾಪಾರಿಗಳು ಮತ್ತು ವ್ಯವಹಾರಗಳನ್ನು ಮಾಡುವವರಿಗೆ ವ್ಯಾಪಾರ ಮಾಡುವ ಸುಲಭತೆಯನ್ನು ಖಚಿತ ಪಡಿಸುತ್ತದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಜಿಎಸ್​ಟಿ ನೀತಿಯಲ್ಲಿ ಸುಧಾರಣೆಗಳನ್ನು ತರುವ ಬಗ್ಗೆ ನಾನು ಪ್ರಸ್ತಾಪಿಸಿದ್ದೆ. ಸಾಮಾನ್ಯ ಜನರಿಗೆ ಜೀವನ ಸುಗಮಗೊಳಿಸುವ ಮತ್ತು ಆರ್ಥಿಕತೆಯನ್ನು ಬಲಪಡಿಸುವ ಗುರಿಯನ್ನು ಹೊಂದಿರುವ ಕ್ರಮ ಇದಾಗಿದೆ ಎಂದಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read