HomeFeatured News2026 Watch Trend: ಮುಂಬರುವ ವಿಧಾನಸಭೆ ಚುನಾವಣೆಗಳತ್ತ ಚಿತ್ತ

2026 Watch Trend: ಮುಂಬರುವ ವಿಧಾನಸಭೆ ಚುನಾವಣೆಗಳತ್ತ ಚಿತ್ತ

2025 ಕಳೆದು ಹೋಗಿದೆ. 2026 ಸ್ವಾಗತಿಸಲು ಜನರು ತಯಾರಿ ನಡೆಸಿದ್ದಾರೆ. ರಾಜಕೀಯ ಪಕ್ಷಗಳು ಸಹ ಮುಂದಿನವ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಯ ತಯಾರಿಯನ್ನು ಪ್ರಾರಂಭಿಸಿದ್ದಾರೆ. 5 ರಾಜ್ಯಗಳ ವಿಧಾನಸಭೆ ಚುನಾವಣೆ, ರಾಜ್ಯಸಭೆಯ  75 ಸೀಟುಗಳ ಭರ್ತಿಗೆ 2026ರಲ್ಲಿ ಚುನಾವಣೆ ನಡೆಯಬೇಕಿದೆ.

2026ರಲ್ಲಿ ತಮಿಳುನಾಡು, ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ ಮತ್ತು ಕೇಂದ್ರಾಡಳಿತ ಪದೇಶವಾದ ಪುದುಚೇರಿ ವಿಧಾನಸಭೆ ಚುನಾವಣೆ ನಡೆಯಬೇಕಿದೆ. ಈ ಚುನಾವಣೆ ಎನ್‌ಡಿಎ ಮತ್ತು ಯುಪಿಎ ಪಾಲಿಗೆ ಅತೀ ಮಹತ್ವದ್ದಾಗಿದೆ.

2025ರಲ್ಲಿ ದೆಹಲಿ ಮತ್ತು ಬಿಹಾರ ವಿಧಾಸನಭೆ ಚುನಾವಣೆ ಮತ್ತು ವಿವಿಧ ರಾಜ್ಯದಲ್ಲಿ ಉಪ ಚುನಾವಣೆಗಳು ನಡೆದವು. ಬಿಹಾರದಲ್ಲಿ ಎನ್‌ಡಿಎ, ದೆಹಲಿಯಲ್ಲಿ ಬಿಜೆಪಿ ಗೆಲ್ಲುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಈ ವರ್ಷ ತೀವ್ರ ಮುಖಭಂಗವಾಗಿದೆ. ಆದರೆ 2026ರಲ್ಲಿ ಕಾಂಗ್ರೆಸ್‌ ತಂತ್ರವೇನು?.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಸ್ಸಾಂ ವಿಧಾನಸಭೆ ಚುನಾವಣೆ: ಅಸ್ಸಾಂ ಚುನಾವಣೆ ದೇಶದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ರಾಜ್ಯದಲ್ಲಿ ಹಾಲಿ ಎನ್‌ಡಿಎ ಸರ್ಕಾರ ಅಸ್ತಿತ್ವದಲ್ಲಿದೆ. ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ. ವಿಶೇಷ ಮತದಾರರ ಪರಿಷ್ಕರಣೆ (ಎಸ್‌ಐಆರ್) ವಿಚಾರದಲ್ಲಿ ಅಸ್ಸಾಂ ಸುದ್ದಿಯಲ್ಲಿದೆ. 2021ರ ಚುನಾವಣೆಯಲ್ಲಿ ಎನ್‌ಡಿಎ 126 ಸೀಟುಗಳ ಪೈಕಿ 75ರಲ್ಲಿ ಗೆಲ್ಲುವ ಮೂಲಕ ಸರ್ಕಾರ ರಚನೆ ಮಾಡಿದೆ. ಕಾಂಗ್ರೆಸ್ ಚುನಾವಣೆಯಲ್ಲಿ ಗೆದ್ದಿದ್ದು 29 ಸೀಟುಗಳು.

ತಮಿಳುನಾಡು: ಡಿಎಂಕೆ & ಕಾಂಗ್ರೆಸ್ ಮೈತ್ರಿಕೂಟ ಅಧಿಕಾರದಲ್ಲಿರುವ ರಾಜ್ಯ ತಮಿಳುನಾಡು. ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್. 2026ರ ವಿಧಾನಸಭೆ ಚುನಾವಣೆಯಲ್ಲಿಯೂ ಜಯಗಳಿಸಿ ಮರಳಿ ಅಧಿಕಾರಕ್ಕೆ ಬರುವ ಉತ್ಸಾಹದಲ್ಲಿ ಮೈತ್ರಿಕೂಟವಿದೆ. ರಾಜ್ಯದ ಪ್ರತಿಪಕ್ಷ ಎಐಎಡಿಎಂಕೆ ಎನ್‌ಡಿಎ ಮೈತ್ರಿಕೂಟ ಸೇರಿದ್ದು, ಈ ಬಾರಿ ಚುನಾವಣೆಯಲ್ಲಿ ಅಧಿಕಾರ ಹಿಡಿಯಬೇಕು ಎಂಬ ಲೆಕ್ಕಾಚಾರದಲ್ಲಿದೆ. ನಟ ವಿಜಯ್ ‘ತಮಿಳಗ ವೆಟ್ರಿ ಕಳಗಂ’ ಪಕ್ಷವನ್ನು ಸ್ಥಾಪನೆ ಮಾಡುವ ಮೂಲಕ ರಾಜ್ಯದ ಚುನಾವಣಾ ಕಣಕ್ಕೆ ಧುಮುಕಿದ್ದಾರೆ.

ಪುದುಚೇರಿ: ಕೇಂದ್ರಾಡಳಿತವಾದ ಪುದುಚೇರಿ ತಮಿಳುನಾಡು ಪಕ್ಕದಲ್ಲಿದೆ. ಇಲ್ಲಿಯೂ 2026ರಲ್ಲಿ ವಿಧಾನಸಭೆ ಚುನಾವಣೆ ನಡೆಯಬೇಕಿದೆ. ಹಾಲಿ ಅಧಿಕಾರದಲ್ಲಿರುವುದು ಆಲ್ ಇಂಡಿಯಾ ಎನ್ಆರ್ ಕಾಂಗ್ರೆಸ್ ಇದು ಕೂಡ ಎನ್‌ಡಿಎ ಮೈತ್ರಿಕೂಟದ ಪಕ್ಷವಾಗಿದೆ. ಕೇಂದ್ರಾಡಳಿತ ಪ್ರದೇಶದ ಅಧಿಕಾರ ಮರಳಿ ಪಡೆಯುವ ಉತ್ಸಾಹದಲ್ಲಿ ಮೈತ್ರಿಕೂಟವಿದೆ. ನಟ ವಿಜಯ್ ಸಹ ಪುದುಚೇರಿ ಚುನಾವಣೆಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ನಿರೀಕ್ಷೆ ಇದೆ.

ಕೇರಳ: ದಕ್ಷಿಣ ಭಾರತದ ಪ್ರಮುಖ ರಾಜ್ಯವಾದ ಕೇರಳದಲ್ಲಿ 2026ರಲ್ಲಿ ಚುನಾವಣೆ ನಡೆಯಲಿದೆ. ಸತತ ಎರಡು ಬಾರಿ ಗೆದ್ದು ಅಧಿಕಾರ ಹಿಡಿದಿರುವ ಸಿಪಿಎಂ ನೇತೃತ್ವದ ಎಲ್‌ಡಿಎಫ್ ಹ್ಯಾಟ್ರಿಕ್ ಬಾರಿಸುವ ಉತ್ಸಾಹದಲ್ಲಿದೆ. ಕಾಂಗ್ರೆಸ್ ನೇತೃತ್ವದ ಯುಡಿಎಫ್‌ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಗೆದ್ದಿದೆ. 2026ರ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲುವ ಭರವಸೆಯಲ್ಲಿದೆ.

ಎಲ್‌ಡಿಎಫ್‌ ಆಡಳಿತ ವಿರೋಧಿ ಅಲೆ ಎದುರಿಸುತ್ತಿದೆ. ಶಬರಿಮಲೆ ದೇವಾಲಯ ಚಿನ್ನದ ಹಗರಣ ಸೇರಿದಂತೆ ವಿವಿಧ ಕಾರಣಕ್ಕೆ ಆಡಳಿತ ಪಕ್ಷ ಜನರ ವಿಶ್ವಾಸ ಕಳೆದುಕೊಂಡಿದೆ. ಆದ್ದರಿಂದ ಕಾಂಗ್ರೆಸ್‌, ಯುಡಿಎಫ್‌ ಅಧಿಕಾರಕ್ಕೆ ಬರುವ ನಿರೀಕ್ಷೆ ಹೊಂದಿದೆ.

ಪಶ್ಚಿಮ ಬಂಗಾಳ: 2026ರ ಮಾರ್ಚ್/ ಏಪ್ರಿಲ್‌ನಲ್ಲಿ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ನಡೆಯುತ್ತಿದೆ. ಪ್ರಸ್ತುತ ಅಧಿಕಾರಲ್ಲಿರುವ ಪಕ್ಷ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ. 2021ರ ಚುನಾವಣೆಯಲ್ಲಿ 77 ಸೀಟುಗಳಲ್ಲಿ ಗೆದ್ದಿದ್ದ ಬಿಜೆಪಿ 2026ರ ಚುನಾವಣೆಯಲ್ಲಿ 160 ಸೀಟು ಗೆಲ್ಲುವ ಕಾರ್ಯತಂತ್ರ ರೂಪಿಸಿದೆ.

ಬಿಜೆಪಿ ಮತ್ತು ಮಮತಾ ಬ್ಯಾನರ್ಜಿ ನಡುವೆ ವಿಶೇಷ ಮತದಾರರ ಪರಿಷ್ಕರಣೆ (ಎಸ್‌ಐಆರ್) ವಿಚಾರದಲ್ಲಿ ಜಟಾಪಟಿ ನಡೆಯುತ್ತಿದೆ. ಕಾಂಗ್ರೆಸ್ ಮತ್ತು ಎಡಪಕ್ಷಗಳು ಸಹ ಪಶ್ಚಿಮ ಬಂಗಾಳದಲ್ಲಿ ಈ ಬಾರಿ ಹೆಚ್ಚಿನ ಸೀಟುಗಳನ್ನು ಗೆಲ್ಲುವ ನಿರೀಕ್ಷೆಯಲ್ಲಿದ್ದಾರೆ.

ರಾಹುಲ್ ಗಾಂಧಿ ನೇತೃತ್ವದಲ್ಲಿ ಸಾಲು ಸಾಲು ಚುನಾವಣೆ ಸೋತು ಕಾಂಗ್ರೆಸ್‌ ತೀವ್ರ ಮುಖಭಂಗ ಅನುಭವಿಸಿದೆ. ಈಗ ಅಧಿಕಾರದಲ್ಲಿರುವ ತಮಿಳುನಾಡು ಕಳೆದು ಹೋದರೆ ಪಕ್ಷಕ್ಕೆ ಮುಜುಗರವಾಗಲಿದೆ.

ಬಿಜೆಪಿ 5 ಚುನಾವಣೆ ಉಸ್ತುವಾರಿಯನ್ನು ಗೃಹ ಸಚಿವ ಅಮಿತ್ ಶಾಗೆ ನೀಡಿದ್ದಾರೆ. ಈಗಾಗಲೇ ಪ್ರತಿ ರಾಜ್ಯಕ್ಕೆ 3 ದಿನಗಳ ಸಮಯವನ್ನು ಅವರು ನಿಗದಿ ಮಾಡಿದ್ದಾರೆ. ಕೇರಳ, ಪಶ್ಚಿಮ ಬಂಗಾಳ ಮತ್ತು ತಮಿಳುನಾಡು ಮೇಲೆ ಬಿಜೆಪಿ ಹೆಚ್ಚಿನ ಗಮನವನ್ನು ಇಟ್ಟಿದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular