ಬೆಂಗಳೂರು: ಬೆಳ್ಳಂಬೆಳಗ್ಗೆ ಬೆಂಗಳೂರಿನಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಿಬಿಎಂಪಿ ಕಾರ್ಯ ನಿರ್ವಾಹಕ ಇಂಜಿನಿಯರ್ ಪ್ರಕಾಶ್ ಮನೆ ಮೇಲೆ ದಾಳಿ ನಡೆಸಲಾಗಿದೆ.
ಕಚೇರಿ, ನಿವಾಸ ಸೇರಿದಂತೆ ನಗರದ ಒಟ್ಟು ಐದು ಕಡೆಗಳಲ್ಲಿ ಲೋಕಾಯುಕ್ತ ದಾಳಿ ನಡೆಸಲಾಗಿದೆ. ಗೋವಿಂದರಾಜ ನಗರ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಾಶ ಅವರಿಗೆ ಸೇರಿದ ಐದು ಸ್ಥಳಗಳ ಮೇಲೆ ದಾಳಿ ನಡೆಸಲಾಗಿದೆ. ನಾಗರಬಾವಿ, ಗೋವಿಂದರಾಜನಗರ, ಯಲಹಂಕ ಭಾಗದಲ್ಲಿ ದಾಳಿ ನಡೆಸಿ ಪರಿಶೀಲಿಸಲಾಗಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.