ಬೆಂಗಳೂರು : ಬೆಂಗಳೂರಲ್ಲಿ ವಾಹನಗಳನ್ನು ಅಡ್ಡಗಟ್ಟಿ ಸವಾರರ ಮೇಲೆ ಹಲ್ಲೆ ನಡೆಸಿ ಪುಂಡರು ಕಿರಿಕ್ ಮಾಡಿದ್ದು, ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿದೆ.
ಬೈಕ್ ನಲ್ಲಿ ಬಂದಂತಹ ಇಬ್ಬರು ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದಾರೆ. ಬೆಂಗಳೂರು ನಗರ ಜಿಲ್ಲೆಯ ಅನೇಕಲ್ ಪೊಲೀಸ್ ಕ್ವಾರ್ಟಸ್ ಬಳಿ ಘಟನೆ ನಡೆದಿದೆ. ವಾಹನಗಳನ್ನು ಅಡ್ಡಗಟ್ಟಿ ಸವಾರರ ಮೇಲೆ ಹಲ್ಲೆ ನಡೆಸಿ ಟ್ರಾಫಿಕ್ ಜಾಮ್ ಉಂಟು ಮಾಡಿದ್ದಾರೆ.
ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಅನೇಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.