HomeIndiaಮಹಿಳೆಯರಿಗೆ ತಿಂಗಳಿಗೆ 1500 ರೂ., ಹಳೆ ಪಿಂಚಣಿ ಯೋಜನೆ ಮರು ಜಾರಿಗೆ ಸಂಪುಟ ಸಭೆಯಲ್ಲಿ ಅನುಮೋದನೆ...

ಮಹಿಳೆಯರಿಗೆ ತಿಂಗಳಿಗೆ 1500 ರೂ., ಹಳೆ ಪಿಂಚಣಿ ಯೋಜನೆ ಮರು ಜಾರಿಗೆ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿ ಸಿಹಿ ಸುದ್ದಿ ನೀಡಿದ ಹಿಮಾಚಲ ಸರ್ಕಾರ

ಶಿಮ್ಲಾ: ಹಿಮಾಚಲ ಕ್ಯಾಬಿನೆಟ್ ಹಳೆಯ ಪಿಂಚಣಿ ಯೋಜನೆಯ ಮರುಸ್ಥಾಪನೆಗೆ ಅನುಮೋದನೆ ನೀಡಿದೆ. ತನ್ನ ಚುನಾವಣಾ ಭರವಸೆಯನ್ನು ಈಡೇರಿಸಲು ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ನೇತೃತ್ವದ ಹಿಮಾಚಲ ಪ್ರದೇಶ ಸರ್ಕಾರ ಶುಕ್ರವಾರ ತನ್ನ ಮೊದಲ ಕ್ಯಾಬಿನೆಟ್ ಸಭೆಯಲ್ಲಿ ಹಳೆಯ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸಲು ಅನುಮೋದನೆ ನೀಡಿದೆ.

ಹೊಸ ಪಿಂಚಣಿ ಯೋಜನೆ(ಎನ್‌ಪಿಎಸ್) ಅಡಿಯಲ್ಲಿ ನೌಕರರು ಮತ್ತು ಪಿಂಚಣಿದಾರರು ಸೇರಿದಂತೆ 1.36 ಲಕ್ಷ ಉದ್ಯೋಗಿಗಳಿದ್ದಾರೆ. ಕಾಂಗ್ರೆಸ್ ಪಕ್ಷವು ಮೊದಲ ಕ್ಯಾಬಿನೆಟ್ ಸಭೆಯಲ್ಲಿ ಹಳೆಯ ಪಿಂಚಣಿ ಯೋಜನೆಯನ್ನು(ಒಪಿಎಸ್) ಮರುಸ್ಥಾಪಿಸುವುದಾಗಿ ಭರವಸೆ ನೀಡಿತ್ತು. ಅದನ್ನು ಈಡೇರಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಳೆ ಪಿಂಚಣಿ ಯೋಜನೆಯ ಲಾಭವನ್ನು ಇಂದಿನಿಂದ ನೀಡಲಾಗುವುದು. ಈ ಬಗ್ಗೆ ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಲಾಗುವುದು ಎಂದು ಸಚಿವ ಸಂಪುಟ ಸಭೆಯ ನಂತರಸುಖು ತಿಳಿಸಿದ್ದಾರೆ.

ಮಹಿಳೆಯರಿಗೆ ಮಾಸಿಕ 1,500 ರೂ. ನೀಡುವ ಭರವಸೆಯನ್ನು ಈಡೇರಿಸುತ್ತೇವೆ ಎಂದ ಅವರು, 1,500 ರೂ. ವಿತರಣಾ ಮಾರ್ಗಸೂಚಿ ತಯಾರಿಸಲು ಚಂದರ್ ಕುಮಾರ್, ಧನಿ ರಾಮ್ ಶಾಂಡಿಲ್, ಅನಿರುದ್ಧ್ ಸಿಂಗ್ ಮತ್ತು ಜಗತ್ ನೇಗಿ ಸೇರಿದಂತೆ ಸಂಪುಟ ಸಚಿವರ ಉಪ ಸಮಿತಿಯನ್ನು ರಚಿಸಲಾಗಿದೆ. 30 ದಿನಗಳಲ್ಲಿ ತಿಂಗಳಿಗೆ 1,500 ರೂ. ನೀಡಲಾಗುವುದು ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular