ರಾಮನಗರ : ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ‘ದೋಸ್ತಿ’ ನಾಯಕರು ಚುನಾವಣಾ ರಣಕಹಳೆ ಮೊಳಗಿಸಿದ್ದು, ನಿಖಿಲ್ ಕುಮಾರಸ್ವಾಮಿ ಭರ್ಜರಿ ರೋಡ್ ಶೋ ನಡೆಸಿದ್ದಾರೆ.
ನವೆಂಬರ್ 13 ರಂದು ನಡೆಯಲಿರುವ ಚನ್ನಪಟ್ಟಣ ಉಪಚುನಾವಣೆಗೆ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ನಿಖಿಲ್ ಕುಮಾರಸ್ವಾಮಿ ಭರ್ಜರಿ ರೋಡ್ ಶೋ ನಡೆಸಿದ್ದಾರೆ.
ಶೇರ್ವಾ ಸರ್ಕಲ್ ನಿಂದ ತಹಶೀಲ್ದಾರ್ ಕಚೇರಿವರೆಗೆ ರೋಡ್ ಶೋ ನಡೆಯಲಿದ್ದು, ಬಳಿಕ ನಾಮಪತ್ರ ಸಲ್ಲಿಸಲಿದ್ದಾರೆ.ಈ ವೇಳೆ ಮಾಜಿ ಸಿಎಂ ಕುಮಾರಸ್ವಾಮಿ, ಡಿವಿ ಸದಾನಂದಗೌಡ, ಆರ್.ಅಶೋಕ್ ಮತ್ತಿತರಿದ್ದರು.
https://twitter.com/JanataDal_S/status/1849648971905728929
https://twitter.com/JanataDal_S/status/1849677692527861998