ರಾಮನಗರ : ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ‘ದೋಸ್ತಿ’ ನಾಯಕರು ಚುನಾವಣಾ ರಣಕಹಳೆ ಮೊಳಗಿಸಿದ್ದು, ನಿಖಿಲ್ ಕುಮಾರಸ್ವಾಮಿ ಭರ್ಜರಿ ರೋಡ್ ಶೋ ನಡೆಸಿದ್ದಾರೆ.
ನವೆಂಬರ್ 13 ರಂದು ನಡೆಯಲಿರುವ ಚನ್ನಪಟ್ಟಣ ಉಪಚುನಾವಣೆಗೆ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ನಿಖಿಲ್ ಕುಮಾರಸ್ವಾಮಿ ಭರ್ಜರಿ ರೋಡ್ ಶೋ ನಡೆಸಿದ್ದಾರೆ.
ಶೇರ್ವಾ ಸರ್ಕಲ್ ನಿಂದ ತಹಶೀಲ್ದಾರ್ ಕಚೇರಿವರೆಗೆ ರೋಡ್ ಶೋ ನಡೆಯಲಿದ್ದು, ಬಳಿಕ ನಾಮಪತ್ರ ಸಲ್ಲಿಸಲಿದ್ದಾರೆ.ಈ ವೇಳೆ ಮಾಜಿ ಸಿಎಂ ಕುಮಾರಸ್ವಾಮಿ, ಡಿವಿ ಸದಾನಂದಗೌಡ, ಆರ್.ಅಶೋಕ್ ಮತ್ತಿತರಿದ್ದರು.
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ NDA ಮೈತ್ರಿ ಅಭ್ಯರ್ಥಿಯಾಗಿರುವ
ಶ್ರೀ @Nikhil_Kumar_k ಅವರು ಇಂದು ನಾಮಪತ್ರ ಸಲ್ಲಿಸಲಿದ್ದಾರೆ.ಈ ಕಾರ್ಯಕ್ರಮದಲ್ಲಿ NDA ಮೈತ್ರಿ ಪಕ್ಷಗಳ ಎಲ್ಲಾ ಮುಖಂಡರು, ಕಾರ್ಯಕರ್ತರು , ಅಭಿಮಾನಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ವಿನಂತಿ.
ದಿನಾಂಕ :… pic.twitter.com/pIBrX7DJZT
— Janata Dal Secular (@JanataDal_S) October 25, 2024
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಎನ್ ಡಿ ಎ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವ ಮುನ್ನ ಶ್ರೀ @Nikhil_Kumar_k ಅವರು, ಇಂದು ಕುಟುಂಬದೊಂದಿಗೆ ಜೆ.ಪಿ.ನಗರದಲ್ಲಿರುವ ಶ್ರೀ ತಿರುಮಲಗಿರಿ ಶ್ರೀಲಕ್ಷ್ಮೀ ವೆಂಕಟೇಶ್ವರಸ್ವಾಮಿ ದೇವಾಲಯಕ್ಕೆ ತೆರಳಿ ದೇವರ ದರ್ಶನ ಪಡೆದರು.
ಬಳಿಕ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಮಾಜಿ… pic.twitter.com/zNZXV5eLIH
— Janata Dal Secular (@JanataDal_S) October 25, 2024

