HomeKarnatakaBREAKING : ರೇಣುಕಾಸ್ವಾಮಿ ಕೊಲೆ ಕೇಸ್ ; ನಟ ದರ್ಶನ್ & ಗ್ಯಾಂಗ್ ಗೆ ಜು....

BREAKING : ರೇಣುಕಾಸ್ವಾಮಿ ಕೊಲೆ ಕೇಸ್ ; ನಟ ದರ್ಶನ್ & ಗ್ಯಾಂಗ್ ಗೆ ಜು. 4 ರವರೆಗೆ ನ್ಯಾಯಾಂಗ ಬಂಧನ..!

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ದರ್ಶನ್ ಸೇರಿ ನಾಲ್ವರ ಪೊಲೀಸ್ ಕಸ್ಟಡಿ ಅಂತ್ಯವಾಗಿದ್ದು, ಈ ಹಿನ್ನೆಲೆ ದರ್ಶನ್ & ಗ್ಯಾಂಗ್ ನ್ನು ಬೆಂಗಳೂರಿನ 24 ನೇ ಎಸಿಎಂಎಂ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು.

ವಿಚಾರಣೆ ನಡೆಸಿದ ಕೋರ್ಟ್   ನಟ ದರ್ಶನ್ ಸೇರಿ ನಾಲ್ವರು ಆರೋಪಿಗಳಿಗೆ ಜುಲೈ 4 ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.    ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ದರ್ಶನ್ ಮತ್ತು ಅವರ ಆಪ್ತರಾದ ವಿನಯ್, ಪ್ರದೋಶ್, ಧನರಾಜ್ ಅವರನ್ನು ಪೊಲೀಸರು ನಗರದ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈಗಾಗಲೇ ಪ್ರಕರಣದ ತನಿಖೆಗಾಗಿ ಮೂರು ಬಾರಿ ಅವರನ್ನು ಕಸ್ಟಡಿಗೆ ಪಡೆದುಕೊಂಡಿದ್ದರು.

ಪವಿತ್ರಾಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ್ದಾರೆ ಎಂದು ಆರೋಪಿಸಿ ದರ್ಶನ್ & ಗ್ಯಾಂಗ್ ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಶೆಡ್ ನಲ್ಲಿ ಬರ್ಬರವಾಗಿ ಕೊಂದು ನಂತರ ಶವ ಬಿಸಾಡಿದ್ದರು. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 28 ಸ್ಥಳಗಳಲ್ಲಿ ಸ್ಥಳ ಮಹಜರು ನಡೆಸಿ ಬಟ್ಟೆ, ಹಲ್ಲೆಗೆ ಬಳಸಿದ್ದ ಲಾಠಿ, ಶವ ಬಿಸಾಡಲು ಬಳಸಿದ್ದ ಕಾರು, ಆರೋಪಿಗಳ ಮೊಬೈಲ್, ಶೂ, ಮರದ ಪೀಸುಗಳು ಸೇರಿ ಸುಮಾರು 139 ವಸ್ತುಗಳನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ.ಪ್ರಕರಣದಲ್ಲಿ ಇದುವರೆಗೆ 28 ಕಡೆ ಸ್ಥಳ ಮಹಜರು ಮಾಡಲಾಗಿದೆ, ದರ್ಶನ್ ಸೇರಿ ಎಲ್ಲಾ ಆರೋಪಿಗಳ ನಿವಾಸ ಹಾಗೂ ಬೇರೆ ಕಡೆ 11 ಸ್ಥಳಗಳಲ್ಲಿ ಮಹಜರು ಮಾಡಲಾಗಿದೆ . ಪಾರ್ಟಿ ಮಾಡಿದ್ದ ಸ್ಟೋನಿಬ್ರೂಕ್ ರೆಸ್ಟೋರೆಂಟ್ ಸೇರಿ ಹಲವು ಕಡೆ ಮಹಜರು ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular