ಮೈಸೂರಿನಲ್ಲಿಂದು ಸಿ.ಎಂ. – ಡಿಸಿಎಂ ಅಬ್ಬರದ ಪ್ರಚಾರ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅತಿ ಹೆಚ್ಚಿನ ಸ್ಥಾನಗಳನ್ನು ಗಳಿಸಿಕೊಡುವ ನಿಟ್ಟಿನಲ್ಲಿ ಕಾರ್ಯತಂತ್ರ ರೂಪಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮೈಸೂರಿನಲ್ಲಿಂದು ಅಬ್ಬರದ ಪ್ರಚಾರ ನಡೆಸಲಿದ್ದಾರೆ.

ಮೈಸೂರು – ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ್ ಪರ ಉಭಯ ನಾಯಕರು ಪ್ರಚಾರ ಕಾರ್ಯ ನಡೆಸಲಿದ್ದು, ಹುಣಸೂರು ಹಾಗೂ ಪಿರಿಯಾಪಟ್ಟಣದಲ್ಲಿ ಸಭೆ ನಡೆಸಲಿದ್ದಾರೆ.

ತವರು ಜಿಲ್ಲೆ ಮೈಸೂರಿನಲ್ಲಿ ತಮ್ಮ ಪಕ್ಷದ ಅಭ್ಯರ್ಥಿ ಗೆಲುವು ಸಾಧಿಸಬೇಕೆಂಬ ನಿಟ್ಟಿನಲ್ಲಿ ಮೂರು ದಿನಗಳ ಕಾಲ ಅಲ್ಲಿಯೇ ಬೀಡು ಬಿಟ್ಟು ತಂತ್ರ ಹೆಣೆದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಎದುರಾಳಿ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದರು. ಇದೀಗ ಮತ್ತೆ ತವರು ಜಿಲ್ಲೆಗೆ ಭೇಟಿ ನೀಡಿ ಪ್ರಚಾರ ನಡೆಸುತ್ತಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read