HomeLatest Newsತುಮಕೂರಿನಲ್ಲಿ ಘೋರ ದುರಂತ: ಕಾರ್ಖಾನೆ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ಇಬ್ಬರು ಕಾರ್ಮಿಕರು ಸಾವು

ತುಮಕೂರಿನಲ್ಲಿ ಘೋರ ದುರಂತ: ಕಾರ್ಖಾನೆ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ಇಬ್ಬರು ಕಾರ್ಮಿಕರು ಸಾವು

ತುಮಕೂರು: ತುಮಕೂರಿನಲ್ಲಿ ಕಾರ್ಖಾನೆ ಸಂಪ್ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ.

ತುಮಕೂರು ಹೊರವಲಯದ ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಬುಧವಾರ ಘಟನೆ ನಡೆದಿದೆ. ಮಧುಗಿರಿ ತಾಲೂಕಿನ ಮಾಗೋಡು ಗ್ರಾಮದ ಪ್ರತಾಪ್(23), ಶಿರಾ ತಾಲೂಕಿನ ತರೂರು ಗ್ರಾಮದ ವೆಂಕಟೇಶ್(32) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಅವರೊಂದಿಗೆ ಇದ್ದ ಮಂಜಣ್ಣ(42), ಯುವರಾಜ್(32) ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಸಾಯನಿಕ ಪದಾರ್ಥ ತಯಾರಿಸುವ ಕೈಗಾರಿಕೆಯಲ್ಲಿ ಇವರು ಕೆಲಸ ಮಾಡುತ್ತಿದ್ದರು. ರಾಸಾಯನಿಕ ಸಂಗ್ರಹಿಸುವ ಸಂಪ್ ಸ್ವಚ್ಛಗೊಳಿಸಲು ಒಳಗೆ ಇಳಿದಿದ್ದ ವೇಳೆ ಉಸಿರು ಗಟ್ಟಿ ಅಸ್ವಸ್ಥರಾಗಿದ್ದಾರೆ. ಕೂಡಲೇ ನಾಲ್ವರನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆಯೇ ಇಬ್ಬರು ಮೃತಪಟ್ಟಿದ್ದಾರೆ. ಮತ್ತಿಬ್ಬರನ್ನು ತುಮಕೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತುಮಕೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular