ನವದೆಹಲಿ: ಅತ್ತ ಪಾಕಿಸ್ತಾನ ಅರಬ್ಬಿ ಸಮುದ್ರದ ಬಳಿ ಕ್ಷಿಪಣಿ ಪರೀಕ್ಷೆ ನಡೆಸಿದ ಬೆನ್ನಲ್ಲೇ ಭಾರತೀಯ ನೌಕಾಪಡೆ ಇತ್ತ ಐಎನ್ ಎಸ್ ಸೂರತ್ ಕ್ಷಿಪಣಿ ಪರೀಕ್ಷೆ ನಡೆಸಿದೆ.
ಕ್ಷಿಪಣಿ ಧ್ವಂಸಕ ಐಎನ್ ಎಸ್ ಸೂರತ್ ಯುದ್ಧನೌಕೆಯಿಂದ ಮಧ್ಯಮ ಶ್ರೇಣಿಯ ನೆಲದಿಂದ ಆಕಾಶಕ್ಕೆ ಚಿಮ್ಮುವ ಕ್ಷಪಣಿಯನ್ನು ಯಶಸ್ವಿಯಾಗಿ ಪರೀಕ್ಷೆ ನಡೆಸಲಾಗಿದೆ ಎಂದು ಭಾರತೀಯ ನೌಕಾಪಡೆ ತಿಳಿಸಿದೆ.
ಈ ಕ್ಷಿಪಣಿ ಸುಮಾರು 70 ಕಿ.ಮೀ ವ್ಯಾಪ್ತಿಯನ್ನು ಹೊಂದಿರಲಿದೆ. ಸ್ವದೇಶಿ ನಿರ್ಮಿತ ಐಎನ್ ಎಸ್ ಸೂರತ್ ಕ್ಷಿಪಣಿ ಪರೀಕ್ಷೆ ಯಶಸ್ವಿಯಾಗಿದ್ದು, ಭಾರತದ ರಕ್ಷಣಾ ಸಾಮರ್ಥ್ಯದ ಬಲ ಮತ್ತಷ್ಟು ವೃದ್ಧಿಯಾಗಿದೆ ಎಂದು ಮಾಹಿತಿ ನೀಡಿದೆ.