ಟೇಕಾಫ್ ಹೊತ್ತಲ್ಲೇ ವಿಮಾನದಲ್ಲಿ ಅನುಚಿತವಾಗಿ ವರ್ತಿಸಿದ ಪ್ರಯಾಣಿಕರಿಬ್ಬರು ವಶಕ್ಕೆ

ನವದೆಹಲಿ: ವಿಮಾನದ ಸಿಬ್ಬಂದಿ ಜೊತೆಗೆ ಪ್ರಯಾಣಿಕರಿಬ್ಬರು ಅನುಚಿತ ವರ್ತನೆ ತೋರಿದ ಘಟನೆ ದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.

ಸ್ಪೈಸ್ ಜೆಟ್ ವಿಮಾನ ಟೇಕಾಫ್ ಆಗುವ ಮೊದಲು ಪ್ರಯಾಣಿಕರಿಬ್ಬರು ಮಹಿಳಾ ಸಿಬ್ಬಂದಿಯೊಂದಿಗೆ ವಾಗ್ವಾದ ನಡೆಸಿದ್ದಾರೆ. ದೆಹಲಿಯಿಂದ ಹೈದರಾಬಾದ್ ಗೆ ತೆರಳಬೇಕಿದ್ದ ವಿಮಾನದಲ್ಲಿ ಘಟನೆ ನಡೆದಿದ್ದು, ಘಟನೆಯ ನಂತರ ಭದ್ರತಾ ಸಿಬ್ಬಂದಿ ಇಬ್ಬರೂ ಪ್ರಯಾಣಿಕರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಇಂದು ದೆಹಲಿ ವಿಮಾನ ನಿಲ್ದಾಣದಲ್ಲಿ ದೆಹಲಿ-ಹೈದರಾಬಾದ್ ಸ್ಪೈಸ್ ಜೆಟ್ ವಿಮಾನದಲ್ಲಿ ಪ್ರಯಾಣಿಕರಿಬ್ಬರು ಅಶಿಸ್ತಿನ ಮತ್ತು ಅನುಚಿತ ವರ್ತನೆ ತೋರಿದ್ದು, ಪ್ರಯಾಣಿಕ ಮತ್ತು ಮತ್ತು ಸಹ-ಪ್ರಯಾಣಿಕನನ್ನು ವಿಮಾನ ನಿಲ್ದಾಣದ ಭದ್ರತಾ ತಂಡಕ್ಕೆ ಹಸ್ತಾಂತರಿಸಲಾಯಿತು ಎಂದು ಹೇಳಲಾಗಿದೆ.

https://twitter.com/ANI/status/1617513615111901184

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read