ಭ್ರೂಣ ಹತ್ಯೆ ಶಿಕ್ಷೆ ಪ್ರಮಾಣ ಹೆಚ್ಚಳ: 5 ವರ್ಷ ಜೈಲು, 5 ಲಕ್ಷ ರೂ. ದಂಡ ಸಾಧ್ಯತೆ

ಬೆಂಗಳೂರು: ಭ್ರೂಣ ಹತ್ಯೆ ಮಾಡುವವರಿಗೆ ವಿಧಿಸುವ ಶಿಕ್ಷೆಯ ಪ್ರಮಾಣ ಹೆಚ್ಚಳ ಬಗ್ಗೆ ಚರ್ಚೆ ನಡೆಸಲಾಗಿದೆ. ಮುಂದಿನ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಗುರುವಾರ ವಿಧಾನಸೌಧದಲ್ಲಿ ಪಿಸಿ ಮತ್ತು ಪಿ.ಎನ್.ಡಿ.ಟಿ. ಕಾಯ್ದೆಯಡಿ ರಚಿಸಲಾದ ಮೇಲ್ವಿಚಾರಣ ಸಮಿತಿಯೊಂದಿಗೆ ಸಭೆ ನಡೆಸಿದ ನಂತರ ಸಚಿವರು ಮಾಹಿತಿ ನೀಡಿದ್ದಾರೆ.

ಭ್ರೂಣ ಹತ್ಯೆ ವಿಚಾರದಲ್ಲಿ ಜಾಗೃತಿ ಜೊತೆಗೆ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈಗಿರುವ ಕಾಯ್ದೆಯಲ್ಲಿ 10,000 ರೂ. ದಂಡ, ಮೂರು ವರ್ಷ ಜೈಲು ಶಿಕ್ಷೆ ಇದೆ. 5 ಲಕ್ಷ ರೂ.ವರೆಗೆ ದಂಡ, 5 ವರ್ಷ ಜೈಲು ಶಿಕ್ಷೆ ವಿಧಿಸುವ ನಿಟ್ಟಿನಲ್ಲಿ ಕಾಯ್ದೆಗೆ ತಿದ್ದುಪಡಿ ತರಲು ಸಮಾಲೋಚನೆ ನಡೆಸಿದ್ದು, ಮುಂದಿನ ಸಭೆಯಲ್ಲಿ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read