HomeLatest Newsರೈಲು ಪ್ರಯಾಣ ದರ ಹೆಚ್ಚಿಸಿ ಬಡ, ಮಧ್ಯಮ ವರ್ಗಕ್ಕೆ ಬರೆ: ಸಿಎಂ ಸಿದ್ಧರಾಮಯ್ಯ ಕಿಡಿ

ರೈಲು ಪ್ರಯಾಣ ದರ ಹೆಚ್ಚಿಸಿ ಬಡ, ಮಧ್ಯಮ ವರ್ಗಕ್ಕೆ ಬರೆ: ಸಿಎಂ ಸಿದ್ಧರಾಮಯ್ಯ ಕಿಡಿ

ಬೆಂಗಳೂರು: ಸಾಮಾನ್ಯ ಜನರ ಸಾರಿಗೆಯಾಗಿಯೇ ಜನಪ್ರಿಯವಾಗಿರುವ ರೈಲುಗಳ ಪ್ರಯಾಣ ದರವನ್ನು ಹೆಚ್ಚಿಸುವ ಮೂಲಕ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ದೇಶದ ಕೋಟ್ಯಂತರ ಮಧ್ಯಮ ಮತ್ತು ಬಡವರ್ಗದ ಬದುಕಿನ ಮೇಲೆ ಬರೆ ಎಳೆದಿದೆ. ಈ ಬೆಲೆ ಏರಿಕೆಯನ್ನು ತಕ್ಷಣ ಹಿಂದೆಗೆದುಕೊಳ್ಳಬೇಕೆಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಒತ್ತಾಯಿಸಿದ್ದಾರೆ.

ಏರುತ್ತಲೇ ಇರುವ ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ದರಗಳ ಭಾರದಿಂದ ಜನರು ಈಗಾಗಲೇ ತತ್ತರಿಸಿಹೋಗಿದ್ದಾರೆ. ಹಾಲು, ಮೊಸರು, ಚಹಾ ಪುಡಿಯಿಂದ ಹಿಡಿದು ಪಾಪ್ ಕಾರ್ನ್ ವರೆಗೆ ಎಲ್ಲದರ ಮೇಲೆ ಜಿಎಸ್‌ಟಿ ಹೇರಿಕೆಯಿಂದಾಗಿ ಪ್ರತಿಯೊಂದು ಕುಟುಂಬದ ಬಜೆಟ್ ಏರುಪೇರಾಗಿದೆ. ಇದೇ ವೇಳೆ ರೈಲು ಪ್ರಯಾಣದ ದರ ಹೆಚ್ಚಿಸುವ ಮೂಲಕ ನರೇಂದ್ರ ಮೋದಿ ಸರ್ಕಾರ ಜನರ ಜೇಬು ಖಾಲಿ ಮಾಡಲು ಹೊರಟಿದೆ ಎಂದು ಟೀಕಿಸಿದ್ದಾರೆ.

ನಮ್ಮ ಸರ್ಕಾರ ರೈತರಿಗೆ ನೆರವಾಗುವ ಉದ್ದೇಶದಿಂದ ಹಾಲಿನ ದರ ಏರಿಕೆ ಮಾಡಿದಾಗ ಜನವಿರೋಧಿ ಎಂದು ಬೊಬ್ಬಿಟ್ಟಿದ್ದ ಬಿಜೆಪಿ ನಾಯಕರು ತಮ್ಮದೇ ಸರ್ಕಾರ ರೈಲು ಪ್ರಯಾಣ ಹೆಚ್ಚಿಸಿದಾಗ ಸದ್ದಿಲ್ಲದೆ ಬಿಲ ಸೇರಿಕೊಂಡಿದ್ದಾರೆ. ಬೆಂಗಳೂರು ಮೆಟ್ರೊ ರೈಲಿನ ಪ್ರಯಾಣ ದರ ಏರಿಕೆಯಾದಾಗ ಬೀದಿಗಿಳಿದಿದ್ದ ಬಿಜೆಪಿ ನಾಯಕರು ಕೇಂದ್ರ ಸರ್ಕಾರದ ಪ್ರತಿನಿಧಿಗಳನ್ನು ಹೊಂದಿರುವ ದರ ನಿರ್ಣಯ ಸಮಿತಿಯೇ ಆ ಏರಿಕೆಯ ನಿರ್ಧಾರ ಕೈಗೊಂಡಿರುವುದನ್ನು ಬಚ್ಚಿಟ್ಟು ನಮ್ಮ ಸರ್ಕಾರದ ವಿರುದ್ದ ಜನರನ್ನು ಎತ್ತಿಕಟ್ಟುವ ವಿಫಲ ಪ್ರಯತ್ನ ನಡೆಸಿದ್ದರು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರೈಲ್ವೆ ಇಲಾಖೆ ಸಂಪೂರ್ಣವಾಗಿ ಕೇಂದ್ರ ಸರ್ಕಾರದ ಸ್ವಾಮ್ಯದಲ್ಲಿದ್ದು, ಪ್ರಪಂಚದಲ್ಲಿಯೇ ಅತ್ಯಂತ ಹೆಚ್ಚು ಪ್ರಯಾಣಿಕರು ಸಂಚರಿಸುವ ಈ ಸಾರಿಗೆ ವ್ಯವಸ್ಥೆ ಈಗಲೂ ಲಾಭದಾಯಕವಾಗಿದೆ. ರೈಲ್ವೆ ಇಲಾಖೆಗೆ ಸಂಬಂಧಿಸಿದ ಪ್ರತ್ಯೇಕ ಬಜೆಟ್ ಮಂಡನೆಯ ಪದ್ಧತಿಯನ್ನು ನರೇಂದ್ರ ಮೋದಿ ಸರ್ಕಾರ ಕೈಬಿಟ್ಟಿರುವ ಕಾರಣ ಇಲಾಖೆಯ ಕಾರ್ಯನಿರ್ವಹಣೆಯಲ್ಲಿ ಪಾರದರ್ಶಕತೆಯೇ ಇಲ್ಲದಂತಾಗಿದೆ. ಈ ಹಿನ್ನೆಲೆಯಲ್ಲಿ ರೈಲುಗಳ ಪ್ರಯಾಣ ದರವನ್ನು ಹೆಚ್ಚಿಸುವ ಮೊದಲು ಇಲಾಖೆಯ ಕಾರ್ಯನಿರ್ವಹಣೆಯ ಬಗ್ಗೆ ಶ್ವೇತಪತ್ರವನ್ನು ದೇಶದ ಜನತೆಯ ಮುಂದಿಡಬೇಕೆಂದು ಒತ್ತಾಯಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular