HomeKarnatakaರಾಜ್ಯದಲ್ಲಿ ಮಕ್ಕಳು, ವೃದ್ದರಲ್ಲಿ ಹೆಚ್ಚಿದ ವೈರಾಣು ಜ್ವರ ಬಾಧೆ: ಆಸ್ಪತ್ರೆಗಳಲ್ಲಿ ದಾಖಲಾತಿ ಪ್ರಮಾಣ ಏರಿಕೆ

ರಾಜ್ಯದಲ್ಲಿ ಮಕ್ಕಳು, ವೃದ್ದರಲ್ಲಿ ಹೆಚ್ಚಿದ ವೈರಾಣು ಜ್ವರ ಬಾಧೆ: ಆಸ್ಪತ್ರೆಗಳಲ್ಲಿ ದಾಖಲಾತಿ ಪ್ರಮಾಣ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಮಲೇರಿಯಾ, ಚಿಕೂನ್ ಗುನ್ಯ, ಡೆಂಗಿ ಸೇರಿದಂತೆ ವೈರಾಣು ಜ್ವರ ಬಾಧೆ ಪ್ರಕರಣಗಳು ತೀವ್ರ ಏರಿಕೆಯಾಗಿದೆ. ಚಿಕಿತ್ಸೆ ಪಡೆಯಲು ಆಸ್ಪತ್ರೆಗೆ ಬರುವ ರೋಗಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದು, ಆಸ್ಪತ್ರೆಗಳಲ್ಲಿ ದಾಖಲಾತಿ ಪ್ರಮಾಣ ಕೂಡ ಹೆಚ್ಚಿದೆ.

ಮಕ್ಕಳು ಹಾಗೂ ಹಿರಿಯರಲ್ಲಿ ಜ್ವರ ಬಾಧೆ ಹೆಚ್ಚಾಗಿದೆ. ಜ್ವರ, ಕೆಮ್ಮು, ನೆಗಡಿ, ಮೈ ಕೈ ನೋವು ಕಾಣಿಸಿಕೊಂಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನ ಆಸ್ಪತ್ರೆಗೆ ಬರತೊಡಗಿದ್ದಾರೆ. ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ದಾಖಲಾತಿ ಪ್ರಮಾಣ ಹೆಚ್ಚಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜ್ವರ ಬಾಧೆ ಪ್ರಕರಣಗಳು ಹೆಚ್ಚಾಗಿ ರಾಜ್ಯದಲ್ಲಿ ನವೆಂಬರ್ 24ರ ವರೆಗೆ 14,116 ಡೆಂಗಿ ಪ್ರಕರಣ ಪತ್ತೆಯಾಗಿವೆ. ತುಮಕೂರು, ಶಿವಮೊಗ್ಗ, ವಿಜಯಪುರ, ಕಲಬುರಗಿ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಡೆಂಗಿ ಪ್ರಕರಣಗಳು ವರದಿಯಾಗಿವೆ. ರಾಜ್ಯದಲ್ಲಿ ನವೆಂಬರ್ 24ರ ವರೆಗೆ 1,410 ಚಿಕೂನ್ ಗುನ್ಯ ಪ್ರಕರಣಗಳು ವರದಿಯಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular