HomeKarnatakaBIG NEWS: ರಾಜ್ಯದಲ್ಲಿ ಹೆಚ್ಚಿದ ಡೆಂಘೀ ಜ್ವರ ಪ್ರಕರಣ: ಸಾಂಕ್ರಾಮಿಕ ರೋಗವೆಂದು ಘೋಷಿಸಿದ ಸರ್ಕಾರ: ನಿಯಮ...

BIG NEWS: ರಾಜ್ಯದಲ್ಲಿ ಹೆಚ್ಚಿದ ಡೆಂಘೀ ಜ್ವರ ಪ್ರಕರಣ: ಸಾಂಕ್ರಾಮಿಕ ರೋಗವೆಂದು ಘೋಷಿಸಿದ ಸರ್ಕಾರ: ನಿಯಮ ಪಾಲಿಸದಿದ್ದರೆ ದಂಡಾಸ್ತ್ರ ಪ್ರಯೋಗ

ಬೆಂಗಳೂರು: ರಾಜ್ಯದಲ್ಲಿ ಡೆಂಘೀ ಜ್ವರ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಡೆಂಘೀ ಜ್ವರವನ್ನು ಸಾಂಕ್ರಾಮಿಕ ರೋಗವೆಂದು ಘೋಷಿಸಿ ಅಧಿಸೂಚನೆ ಹೊರಡಿಸಿದೆ.

ಸೊಳ್ಳೆಗಳ ಸಂತಾನೋತ್ಪತ್ತಿ ನಿಯಂತ್ರಿಸಲು ವಿಫಲರಾದವರ ಮೇಲೆ ದಂಡಾಸ್ತ್ರ ಪ್ರಯೋಗಿಸಲಾಗುವುದು. ಕಟ್ಟಡ ಅಥವಾ ಜಮೀನಿನ ಮಾಲೀಕರು, ಬಾಡಿಗೆದಾರರು ವಾಸ ಸ್ಥಳಗಳಲ್ಲಿ ಸೊಳ್ಳೆ ಸಂತಾನೋತ್ಪತ್ತಿಯಾಗದಂತೆ ನೋಡಿಕೊಳ್ಳಬೇಕು. ಕಟ್ಟಡ ಜಮೀನಿನ ಬಳಿ ನೀರು ಶೇಖರಣೆ, ಅನುಪಯುಕ್ತ ಟ್ಯಾಂಕ್ ಗಳು ಇಲ್ಲದಂತೆ ಎಚ್ಚರಿಕೆ ವಹಿಸಬೇಕೆಂದು ಹೇಳಲಾಗಿದೆ.

ಸೊಳ್ಳೆಗಳ ಸಂತಾನೋತ್ಪತ್ತಿ ತಡೆಯಲು ಅಗತ್ಯ ಕ್ರಮ ಕೈಗೊಳ್ಳುವುದು ಕಡ್ಡಾಯವಾಗಿದೆ. ನೀರಿನ ಶೇಖರಣ ಪಾತ್ರೆಗಳು, ಸಂಪ್, ಓವರ್ ಹೆಡ್ ಟ್ಯಾಂಕ್ ಗಳಲ್ಲಿ ಸೊಳ್ಳೆಗಳ ಸಂತಾನೋತ್ಪತ್ತಿ ತಡೆಯಬೇಕು. ಡೆಂಘೀ ನಿಯಂತ್ರಣ ಕ್ರಮ ಜಾರಿಗೆ ತರುವುದು, ಕಾಲಕಾಲಕ್ಕೆ ಪರಿಶೀಲನೆ ಜೊತೆಗೆ ನಿಯಮ ಉಲ್ಲಂಘಿಸುವವರಿಗೆ ದಂಡ ವಿಧಿಸಲು ಬಿಬಿಎಂಪಿ ಆಯುಕ್ತರು ಮತ್ತು ಬೆಂಗಳೂರು ಹೊರತುಪಡಿಸಿ ಉಳಿದ ಜಿಲ್ಲೆಗಳ ಅಧಿಕಾರ ವ್ಯಾಪ್ತಿಗೆ ಮಾತ್ರ ಸಕ್ಷಮ ಪ್ರಾಧಿಕಾರ ರಚಿಸಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿಯಮಗಳನ್ನು ಎಲ್ಲರೂ ಕಟ್ಟುನಿಟ್ಟಾಗಿ ಪಾಲಿಸಬೇಕು. ಇಲ್ಲದಿದ್ದರೆ ದಂಡ ಪ್ರಯೋಗಿಸಲಾಗುವುದು. ಸೊಳ್ಳೆಗಳ ಸಂತಾನೋತ್ಪತ್ತಿ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳದ ನಗರದ ಕುಟುಂಬಗಳಿಗೆ 800 ರೂ., ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ 400 ರೂ. ದಂಡ ವಿಧಿಸಲಾಗುತ್ತದೆ.

ನಗರ ಮತ್ತು ಗ್ರಾಮೀಣ ಪ್ರದೇಶಗಳ ವಾಣಿಜ್ಯ ಸಂಸ್ಥೆಗಳು, ಕಚೇರಿಗಳು, ಶಾಲಾ, ಕಾಲೇಜುಗಳು, ಆರೋಗ್ಯ ಸೇವಾ ಕ್ಷೇತ್ರಗಳಿಗೆ ಕ್ರಮವಾಗಿ 2000 ರೂ., 1500 ರೂ. ದಂಡ ವಿಧಿಸಲಾಗುವುದು. ಪ್ರಗತಿಯಲ್ಲಿರುವ ಅಥವಾ ನಿರ್ಮಾಣ ಸ್ಥಳಗಳು, ಖಾಲಿ ಜಾಗಗಳಿಗೆ 4000 ರೂ., 2000 ರೂ. ದಂಡ ವಿಧಿಸಲಾಗುವುದು. ಸೂಚನೆ ನಂತರವೂ ನಿಯಮ ಪಾಲಿಸದಿದ್ದರೆ ಹೆಚ್ಚುವರಿಯಾಗಿ ಶೇಕಡ 50ರಷ್ಟು ದಂಡ ವಿಧಿಸಲಾಗುವುದು ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular