HomeKarnatakaBREAKING : ರಾಜ್ಯದಲ್ಲಿ ಹೆಚ್ಚಿದ 'ಡೆಂಗ್ಯೂ' ಅಬ್ಬರ ; ಹಾವೇರಿಯಲ್ಲಿ 9 ವರ್ಷದ ಮಗು ಬಲಿ..!

BREAKING : ರಾಜ್ಯದಲ್ಲಿ ಹೆಚ್ಚಿದ ‘ಡೆಂಗ್ಯೂ’ ಅಬ್ಬರ ; ಹಾವೇರಿಯಲ್ಲಿ 9 ವರ್ಷದ ಮಗು ಬಲಿ..!

ಹಾವೇರಿ : ರಾಜ್ಯದಲ್ಲಿ ಮಹಾಮಾರಿ ಡೆಂಘೀ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಡೆಂಘೀ ಸೋಂಕಿಗೆ ಮಕ್ಕಳು ಬಲಿಯಾಗುತ್ತಿದ್ದಾರೆ. ಬೆಂಗಳೂರಿನಲ್ಲಿ ಡೆಂಘೀ ಜ್ವರಕ್ಕೆ ಬಾಲಕನೊಬ್ಬ ಮೃತಪಟ್ಟಿದ್ದು, ಈ ಬೆನ್ನಲ್ಲೇ  ಹಾವೇರಿಯಲ್ಲಿ 9 ವರ್ಷದ ಮಗು ಚಿಕಿತ್ಸೆ ಫಲಿಸದೇ ಮೃತಪಟ್ಟಿದೆ.

ಮೃತ ಮಗುವನ್ನು ಬ್ಯಾಡಗಿ ತಾಲೂಕಿನ ಮಾಸಣಗಿ ಗ್ರಾಮದ ದ್ಯಾಮಪ್ಪ ಬನ್ನಿಹಟ್ಟಿ ಎಂಬುವವರ ಪುತ್ರಿ ದಿವ್ಯ ದ್ಯಾಮಪ್ಪ ಎಂದು ಗುರುತಿಸಲಾಗಿದೆ . ಜ್ವರದಿಂದ ಬಳಲುತ್ತಿದ್ದ ಮಗುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಿಸದೇ ಮಗು ಮೃತಪಟ್ಟಿದೆ.

ಬೆಂಗಳೂರಿನಲ್ಲಿ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ 11 ವರ್ಷದ ಬಾಲಕ ಗಗನ್ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ. ಅಂಜನಾಪುರದ ಗಗನ್ ಜಂಬೂಸವಾರಿ ದಿಣ್ಣೆ ಖಾಸಗಿ ಶಾಲೆಯಲ್ಲಿ ಓದುತ್ತಿದ್ದ. ಕೆಲ ದಿನಗಳಿಂದ ಡೆಂಘೀ ಜ್ವರದಿಂದ ಬಳಲುತ್ತಿದ್ದನು.ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನೂ ಕೊಡಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular