HomeKarnatakaಮೃಗಾಲಯಗಳಿಗೆ ಹೆಚ್ಚಿದ ಪ್ರವಾಸಿಗರ ಭೇಟಿ: 9 ತಿಂಗಳಲ್ಲಿ 75.72 ಕೋಟಿ ರೂ. ಆದಾಯ

ಮೃಗಾಲಯಗಳಿಗೆ ಹೆಚ್ಚಿದ ಪ್ರವಾಸಿಗರ ಭೇಟಿ: 9 ತಿಂಗಳಲ್ಲಿ 75.72 ಕೋಟಿ ರೂ. ಆದಾಯ

ಮೈಸೂರು: ಕರ್ನಾಟಕ ಮೃಗಾಲಯ ಪ್ರಾಧಿಕಾರ ಅಧೀನದ ಮೃಗಾಲಯಗಳಲ್ಲಿ ಕಳೆದ 9 ತಿಂಗಳಲ್ಲಿ 75.72 ಕೋಟಿ ರೂ. ಆದಾಯ ಸಂಗ್ರಹವಾಗಿದೆ.

2022ರ ಏಪ್ರಿಲ್ 1 ರಿಂದ ಡಿಸೆಂಬರ್ 31ರವರೆಗಿನ 9 ತಿಂಗಳ ಅವಧಿಯಲ್ಲಿ 52,77,013 ಜನ ಮೃಗಾಲಯಗಳಿಗೆ ಭೇಟಿ ನೀಡಿದ್ದು, 75.72 ಕೋಟಿ ರೂ. ಆದಾಯ ಸಂಗ್ರಹವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಾಧಿಕಾರದ ಅಧ್ಯಕ್ಷ ಎಂ. ಶಿವಕುಮಾರ್ ಈ ಬಗ್ಗೆ ಮಾಹಿತಿ ನೀಡಿದ್ದು, ಕೊರೋನಾ ನಂತರ ಮೃಗಾಲಯಗಳಿಗೆ ಭೇಟಿ ನೀಡುವ ಜನರ ಸಂಖ್ಯೆ ಹೆಚ್ಚಾಗಿದೆ. ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತಿದೆ. ಮೈಸೂರು ಮೃಗಾಲಯಕ್ಕೆ 25.05 ಲಕ್ಷ ಜನ ಭೇಟಿ ನೀಡಿದ್ದು, 24.76 ಕೋಟಿ ರೂಪಾಯಿ ಆದಾಯ ಸಂಗ್ರಹವಾಗಿದೆ. ಬನ್ನೇರುಘಟ್ಟಕ್ಕೆ 16.12 ಲಕ್ಷ  ಜನ ಭೇಟಿ ನೀಡಿದ್ದು, 42.68 ಕೋಟಿ ರೂ. ಆದಾಯ ಸಂಗ್ರಹವಾಗಿದೆ. ಶಿವಮೊಗ್ಗ ಮೃಗಾಲಯಕ್ಕೆ 2.41 ಲಕ್ಷ ಜನ ಭೇಟಿ ನೀಡಿದ್ದು, 3.22 ಕೋಟಿ ರೂ. ಸಂಗ್ರಹವಾಗಿದೆ. ಮೈಸೂರು ಮೃಗಾಲಯಕ್ಕೆ ಡಿಸೆಂಬರ್ ತಿಂಗಳಲ್ಲಿ 5.24 ಲಕ್ಷ ಜನ ಭೇಟಿ ನೀಡಿರುವುದು ಇತ್ತೀಚಿನ ವರ್ಷಗಳಲ್ಲಿ ದಾಖಲೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular