HomeIndiaವಿಶ್ವಕಪ್ ನಲ್ಲಿ ಭಾರತ ಸೋಲಿನ ಆಘಾತ: ಆತ್ಮಹತ್ಯೆಗೆ ಶರಣಾದ ಯುವಕ

ವಿಶ್ವಕಪ್ ನಲ್ಲಿ ಭಾರತ ಸೋಲಿನ ಆಘಾತ: ಆತ್ಮಹತ್ಯೆಗೆ ಶರಣಾದ ಯುವಕ

ಕೊಲ್ಕೊತ್ತಾ: ಭಾರತ ವಿಶ್ವಕಪ್ ಫೈನಲ್‌ ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತ ನಂತರ 23 ವರ್ಷದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅವರ ಕುಟುಂಬ ತಿಳಿಸಿದೆ.

ಘಟನೆ ಭಾನುವಾರ ರಾತ್ರಿ 11 ಗಂಟೆಯ ಸುಮಾರಿಗೆ ಪಶ್ಚಿಮ ಬಂಗಾಳದ ಬಂಕುರಾ ಜಿಲ್ಲೆಯ ಬೆಲಿಯತೋರ್ ಪೊಲೀಸ್ ಠಾಣೆ ವ್ಯಾಪ್ತಿಯ ಸಿನಿಮಾ ಹಾಲ್ ಬಳಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. .

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಹುಲ್ ಲೋಹರ್ ಅವರು ಈ ಪ್ರದೇಶದ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದು, ಫೈನಲ್ ಪಂದ್ಯ ವೀಕ್ಷಿಸಲು ಭಾನುವಾರ ರಜೆ ತೆಗೆದುಕೊಂಡಿದ್ದರು. ಆಸ್ಟ್ರೇಲಿಯಾ ವಿರುದ್ಧದ ಭಾರತ ಸೋಲಿನಿಂದ ಮನನೊಂದ ಅವರು ತಮ್ಮ ಕೋಣೆಯಲ್ಲಿ ನೇಣು ಹಾಕಿಕೊಂಡಿದ್ದಾರೆ ಎಂದು ಅವರ ಸೋದರಮಾವ ಉತ್ತಮ್ ಸುರ್ ತಿಳಿಸಿದ್ದು, ಉಳಿದಂತೆ ಅವರ ಜೀವನದಲ್ಲಿ ಅಂತಹ ಯಾವುದೇ ಸಮಸ್ಯೆಗಳಿರಲಿಲ್ಲ ಎಂದು ಅವರು ಹೇಳಿದರು.

ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸೋಮವಾರ ಬೆಳಗ್ಗೆ ಬಂಕುರಾ ಸಮ್ಮಿಲಾನಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಕಳುಹಿಸಲಾಗಿದ್ದು, ಅಸ್ವಾಭಾವಿಕ ಸಾವಿನ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular